ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಬೆಂಗಳೂರು : ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸನ್ಮಾನ ಮಾಡುವ ಬಿಜೆಪಿ ಮುಖಂಡರು ನಾಡಪ್ರಭು ಕೆಂಪೇಗೌಡ ಪ್ರತಿಮೆಯ ಸ್ಮರಣಿಕೆ ನೀಡಲು ತೀರ್ಮಾನಿಸಿದ್ದಾರೆ.

ಬಿಜೆಪಿ ಬೆಂಗಳೂರು ಮಹಾನಗರ ಜಿಲ್ಲೆ ಅಧ್ಯಕ್ಷ ಪಿ.ಎನ್. ಸದಾಶಿವ ಅವರಿಗೆ ಇದರ ಉಸ್ತುವಾರಿ ವಹಿಸಲಾಗಿದೆ. ಸದಾಶಿವ ನೇತೃತ್ವದ ತಂಡವು ಸನ್ಮಾನಿಸಿ ಸ್ಮರಣಿಕೆಯನ್ನು ನೀಡಿ ಗೌರವಿಸಲಿದೆ. ಈ ವೇಳೆ ಬಿಜೆಪಿ ಪ್ರಮಖ ನಾಯಕರು ಇರಲಿದ್ದಾರೆ.