ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆಯನ್ನು ಸದ್ಯದಲ್ಲೇ ಅಂತಿಮಗೊಳಿಸಲಾಗುವುದು ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಗುರುವಾರ ಭರವಸೆ ನೀಡಿದ್ದಾರೆ. ಆಂಧ್ರ ಪ್ರದೇಶದ ಆರ್ಥಿಕ ಸಂಕಷ್ಟ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಪರಿ ಹರಿಸಲಾಗುವುದು ಹೇಳಿದ್ದಾರೆ.

ಅಮರಾವತಿ: ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆಯನ್ನು ಸದ್ಯದಲ್ಲೇ ಅಂತಿಮಗೊಳಿಸಲಾಗುವುದು ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಗುರುವಾರ ಭರವಸೆ ನೀಡಿದ್ದಾರೆ. ಆಂಧ್ರ ಪ್ರದೇಶದ ಆರ್ಥಿಕ ಸಂಕಷ್ಟ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಪರಿ ಹರಿಸಲಾಗುವುದು ಹೇಳಿದ್ದಾರೆ.

ಲೋಕಸಭೆಯಲ್ಲಿ ಅರುಣ್‌ ಜೇಟ್ಲಿ ಬಜೆಟ್‌ ಮೇಲಿನ ಚರ್ಚೆಗೆ ಉತ್ತರಿಸಲು ಮುಂದಾದಾಗ, ಟಿಡಿಪಿ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಆಗ್ರಹಿಸಿದರು. ಈ ವೇಳೆ, ಆಂಧ್ರ ಪ್ರದೇಶ ಎದುರಿಸುತ್ತಿರು ಆರ್ಥಿಕ ಸಂಕಷ್ಟವನ್ನು ಬಗೆಹರಿಸಲು ಶೀಘ್ರದಲ್ಲೇ ವಿಶೇಷ ಪ್ಯಾಕೇಜ್‌ ನೀಡಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಕೇಂದ್ರ ಸರ್ಕಾರ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಟಿಡಿಪಿ ಶಾಸಕ ಬೊಂಡೆ ಪ್ರಸಾದ್‌ ತಲೆಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ಕರೆ ನೀಡಿದ ನಾಯ್ಡು:ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸದ್ಯ ದುಬೈ ಪ್ರವಾಸ ಕೈಗೊಂಡಿದ್ದು, ಅಲ್ಲಿಂದಲೇ ಬುಧವಾರ ರಾತ್ರಿ ಟೆಲಿಕಾನ್ಫೆರೆನ್ಸ್‌ ಮೂಲಕ ಟಿಡಿಪಿ ಸಂಸದರಿಗೆ ಸಂಸತ್ತಿನಲ್ಲಿ ಪ್ರತಿಭಟನೆ ಮುಂದುವರಿಸುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.