ನವದೆಹಲಿ(ನ.08): ಮಹತ್ವದ ಬೆಳವಣಿಗೆಯೊಂದರಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ , ಪುತ್ರ ರಾಹುಲ್ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗಿದ್ದ  ವಿಶೇಷ ಭದ್ರತಾ ವ್ಯವಸ್ಥೆ (ಎಸ್‌ಪಿಜಿ) ಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. 

ಗಾಂಧಿ ಕುಟುಂಬಕ್ಕೆ ಇದೀಗ CRPF ಝಡ್ ಪ್ಲಸ್ ಭದ್ರತೆಯನ್ನು ನೀಡಲಾಗಿದ್ದು, ಎಸ್‌ಪಿಜಿ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ.

2017 ರಲ್ಲಿ 3360 ಗಣ್ಯರಿಗೆ ಭದ್ರತಾ ವ್ಯವಸ್ಥೆ ಕಡಿತ; ಕೇಂದ್ರ

1984ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ತಮ್ಮ ಅಂಗರಕ್ಷಕರಿಂದಲೇ ಹತ್ಯೆಯಾದ ಬಳಿಕ ಹಾಲಿ ಪ್ರಧಾನಿಗೆ ಹಾಗೂ ಮಾಜಿ ಪ್ರಧಾನಿಗಳಿಗೆ ಮತ್ತು ಅವರ ನಿಕಟ ಕುಟುಂಬಕ್ಕೆ ಎಸ್‌ಪಿಜಿ ಭದ್ರತೆ ಕೊಡುವ ವ್ಯವಸ್ಥೆ ಜಾರಿ ಮಾಡಲಾಯಿತು.

ಇದೊಳ್ಳೆ ತಲೆನೋವು! ವಿದೇಶಕ್ಕೆ ಹೋದ್ರೂ ರಾಹುಲ್ ಎಸ್‌ಪಿಜಿ ಸಿಬ್ಬಂದಿ ಕರೆದೊಯ್ಯಲ್ಲ!

ಬಳಿಕ ತಮಿಳುನಾಡಿನ ಶ್ರೀಪೆರುಂಬುದೂರಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಎಲ್‌ಟಿಟಿಇ ಆತ್ಮಹತ್ಯಾ ಬಾಂಬ್ ದಾಳಿ ಮೂಲಕ ಹತ್ಯೆಗೈದ ನಂತರ, ಎಸ್‌ಪಿಜಿ ಭದ್ರತೆಯಲ್ಲಿ ಮತ್ತಷ್ಟು ಬದಲಾವಣೆ ಮಾಡಲಾಗಿತ್ತು.

ಇತ್ತೀಚಿಗೆ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ಎಸ್‌ಪಿಜಿ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ಮಾಜಿ ಪ್ರಧಾನಿ ಡಾ. ಸಿಂಗ್‌ ಎಸ್‌ಪಿಜಿ ಭದ್ರತೆ ವಾಪಸ್‌!