ಈಗಾಗಲೇ ಚಿಕ್ಕಮಗಳೂರು ಸೇರಿದಂತೆ ರಾಜ್ಯದ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ದಿಸುವಂತೆ ಆಹ್ವಾನ ಬಂದಿದೆ. ಈ ಪೈಕಿ ಯಾವುದಾದರೊಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಖಚಿತ ಎಂದು ತಿಳಿಸಿದರು.

ಚಿಕ್ಕಮಗಳೂರು(ನ.19): ರಾಜ್ಯದಲ್ಲಿ ಹಿಂದುತ್ವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಹೀಗಾಗಿ ಹಿಂದುತ್ವದ ರಕ್ಷಣೆಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸಲಿದ್ದೇನೆ ಎಂದು ಶ್ರೀ ರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ ಶಿವಸೇನೆಯೊಂದಿಗೆ ಎರಡು ಸುತ್ತಿನ ಮಾತುಕತೆ ನಡೆದಿದ್ದು, ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುತಾಲಿಕ್ ಹೇಳಿದ್ದಾರೆ. ಈಗಾಗಲೇ ಚಿಕ್ಕಮಗಳೂರು ಸೇರಿದಂತೆ ರಾಜ್ಯದ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ದಿಸುವಂತೆ ಆಹ್ವಾನ ಬಂದಿದೆ. ಈ ಪೈಕಿ ಯಾವುದಾದರೊಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಖಚಿತ ಎಂದು ತಿಳಿಸಿದರು.

ಇದೇವೇಳೆ ಶ್ರೀ ರಾಮ ಸೇನೆ ಕಾರ್ಯಕರ್ತ ಶರಣಪ್ಪ ಹತ್ಯೆ ಬಗ್ಗೆ ಪ್ರಸ್ತಾಪಿಸಿದ ಮುತಾಲಿಕ್, ಸರ್ಕಾರದ ಕುಮ್ಮಕ್ಕಿನಿಂದಲೇ ಶ್ರೀ ರಾಮ ಸೇನೆಯ ಕಾರ್ಯಕರ್ತನ ಹತ್ಯೆ ನಡೆದಿದ್ದು, ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.