Asianet Suvarna News Asianet Suvarna News

ಸಿಐಡಿ ದೇಶದ ಭದ್ರತೆ ಬಗ್ಗೆ ಸರ್ಕಾರಕ್ಕೆ ನೀಡಿದೆ ಒಂದು ಗಂಭೀರ ಎಚ್ಚರಿಕೆ..!

ಜಮ್ಮು-ಕಾಶ್ಮೀರದ ಶ್ರೀನಗರ ಕೇಂದ್ರೀಯ ಜೈಲು, ಉಗ್ರರ ನೇಮಕಾತಿಯ ತಾಣವಾದ ಬಗ್ಗೆ ಜಮ್ಮು-ಕಾಶ್ಮೀರ ಸಿಐಡಿ ಎಚ್ಚರಿಕೆ ನೀಡಿದೆ. ಪರ್ಯಾಯ ಆಡಳಿತಾತ್ಮಕ ವ್ಯವಸ್ಥೆಯನ್ನೇ ಸ್ಥಾಪಿಸಿರುವ ಇಲ್ಲಿನ ಕೈದಿಗಳು, ಉಗ್ರರ ನೇಮಕಾತಿ ಚಟುವಟಿಕೆಗಳಲ್ಲಿ ನಿರತರಾದ ಬಗ್ಗೆ ಹಲವು ಮುನ್ನೆಚ್ಚರಿಕೆಯ ಹೊರತಾಗಿಯೂ, ಇಲ್ಲಿನ ಪೊಲೀಸರು ಈ ಅಂಶ ನಿರ್ಲಕ್ಷಿಸಿದ್ದಾರೆ ಎನ್ನಲಾಗಿದೆ.

Srinagar Central Jail hub of Terrorist Recruitment  JK CID report

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರ ಕೇಂದ್ರೀಯ ಜೈಲು, ಉಗ್ರರ ನೇಮಕಾತಿಯ ತಾಣವಾದ ಬಗ್ಗೆ ಜಮ್ಮು-ಕಾಶ್ಮೀರ ಸಿಐಡಿ ಎಚ್ಚರಿಕೆ ನೀಡಿದೆ. ಪರ್ಯಾಯ ಆಡಳಿತಾತ್ಮಕ ವ್ಯವಸ್ಥೆಯನ್ನೇ ಸ್ಥಾಪಿಸಿರುವ ಇಲ್ಲಿನ ಕೈದಿಗಳು, ಉಗ್ರರ ನೇಮಕಾತಿ ಚಟುವಟಿಕೆಗಳಲ್ಲಿ ನಿರತರಾದ ಬಗ್ಗೆ ಹಲವು ಮುನ್ನೆಚ್ಚರಿಕೆಯ ಹೊರತಾಗಿಯೂ, ಇಲ್ಲಿನ ಪೊಲೀಸರು ಈ ಅಂಶ ನಿರ್ಲಕ್ಷಿಸಿದ್ದಾರೆ ಎನ್ನಲಾಗಿದೆ.

 ಒಳಗಿಂದ ಒಪ್ಪಿಗೆ ಸಿಕ್ಕಲ್ಲಿ ಮಾತ್ರ ಹೊಸ ಉಗ್ರನ ನೇಮಕ ಮಾಡಿಕೊಳ್ಳುವಷ್ಟರ ಮಟ್ಟಿಗೆ ಕೇಂದ್ರೀಯ ಜೈಲಿನ ಪಾತ್ರ ಮುಖ್ಯವಾಗಿದೆ. ಆದಾಗ್ಯೂ, ಇಂತಹ ಒಪ್ಪಿಗೆ ಯಾರು ನೀಡುತ್ತಾರೆ ಎಂಬ ಪರಿಶೀಲನೆ ನಡೆಯುತ್ತಿದೆ. ಆಡಳಿತ ವ್ಯವಸ್ಥೆ ಯಂತೆ, ಜೈಲಿನೊಳಗೆ ಕೈದಿಗಳದ್ದೂ ಪರ್ಯಾಯ ಆಡಳಿತ ವ್ಯವಸ್ಥೆಯಿದೆ. 6 ಜನರ ಘೋಷಿತ ಆಡಳಿತ ಮಂಡಳಿಗೆ ಒಬ್ಬ ಮುಖ್ಯಸ್ಥನೂ ಇರುತ್ತಾನೆ. ಈ ಮಂಡಳಿ 6 ತಿಂಗಳಿಗೊಮ್ಮೆ ಬದಲಾಗುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕೈದಿಗಳು ಇಲ್ಲಿನ ಜೈಲು ಸಿಬ್ಬಂದಿಗೆ ಪ್ರತ್ಯಕ್ಷ ಅಥವಾ ಪರೋಕ್ಷ ಬೆದರಿಕೆಯನ್ನು ಹಾಕುವುದರಿಂದ, ಇದು ಮೇಲಾಧಿಕಾರಿಗಳ ಗಮನಕ್ಕೂ ಬರುತ್ತಿಲ್ಲ ಎನ್ನಲಾಗಿದೆ.

Follow Us:
Download App:
  • android
  • ios