ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಬಯಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದೇ ನನ್ನ ಏಕೈಕ ಗುರಿ ಎಂದು ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿ. ಶ್ರೀನಿವಾಸ ಪ್ರಸಾದ್ ಪುನರುಚ್ಚರಿಸಿದ್ದಾರೆ.

ಮೈಸೂರು(ಡಿ.31): ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಬಯಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದೇ ನನ್ನ ಏಕೈಕ ಗುರಿ ಎಂದು ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿ. ಶ್ರೀನಿವಾಸ ಪ್ರಸಾದ್ ಪುನರುಚ್ಚರಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನಿಗೆ ಏಕೀಕರಣವೂ ಗೊತ್ತಿಲ್ಲ, ಏನೂ ಗೊತ್ತಿಲ್ಲ. ಆದರೂ, ನವ ಕರ್ನಾಟಕ ನಿರ್ಮಾಣಕ್ಕೆ ಹೊರಟಿದ್ದಾರೆ. ಸಿದ್ದರಾ ಮಯ್ಯರನ್ನು ಚಾಮುಂಡೇಶ್ವರಿಯಲ್ಲಿ ಸೋಲಿಸುವುದೇ ನನ್ನ ಏಕೈಕ ಗುರಿ. ಇದನ್ನು ಹಿಂದೆಯೂ ಹೇಳಿದ್ದೇನೆ.ಈಗಲೂ ಅದಕ್ಕೆ ಬದ್ಧ ಎಂದರು.

ಮತ್ತೆ ಸ್ಪರ್ಧಿಸಲ್ಲ: ಸ್ವಾಭಿಮಾನ ಮುಂದಿಟ್ಟುಕೊಂಡು ಉಪ ಚುನಾವಣೆಗೆ ಹೋದ ನನಗೆ ಜನ 65000 ಮತ ನೀಡಿದ್ದಾರೆ. ಈ ಉಪ ಚುನಾವಣೆಯಲ್ಲಿ ಏನೇನು ನಡೆಯಿತು. ನನ್ನನ್ನು ಸೋಲಿಸಲು ಯಾವ್ಯಾವ ಷಡ್ಯಂತ್ರ ಮಾಡಿದರು ಎಂಬ ಬಗ್ಗೆ ಪುಸ್ತಕ ಬರೆಯುತ್ತಿದ್ದು, ಸದ್ಯದಲ್ಲೇ ಅದನ್ನು ಬಿಡುಗಡೆ ಮಾಡುತ್ತಿದ್ದೇನೆ. ಚುನಾವಣಾ ರಾಜಕಾರಣಕ್ಕೆ ನಾನು ನಿವೃತ್ತಿ ಘೋಷಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಜನರ ಒತ್ತಡಕ್ಕೆ ಮಣಿದು ನಂಜನಗೂಡಿನಿಂದ ಸ್ಪರ್ಧಿಸುತ್ತೇನೆ ಎಂಬುದು ಸರಿಯಲ್ಲ. ನಾನು ಅಷ್ಟು ಲಜ್ಜೆಗೆಟ್ಟಿಲ್ಲ ಎಂದರು.