ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಅವರು ಶಿವರಾಂಗೆ ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಶ್ರೀನಿವಾಸ ಪ್ರಸಾದರನ್ನು   ಕರೆತರುವ ಮಾತುಕತೆ ನಡೆದಿದೆ. 

ಬೆಂಗಳೂರು(ಅ.15): ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ಬೆನ್ನಲೆ ಮಾಜಿ ಸಚಿವ ಶ್ರೀನಿವಾಸ ಪ್ರಸಾದರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. 

ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಅವರು ಶಿವರಾಂಗೆ ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಶ್ರೀನಿವಾಸ ಪ್ರಸಾದರನ್ನು ಕರೆತರುವ ಮಾತುಕತೆ ನಡೆದಿದೆ. 

ಅಧಿಕೃತವಾಗಿ ಬಿಜೆಪಿ ಸೇರಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಿವರಾಜ್, ದಲಿತರಿಗೆ ಕಿರುಕುಳ ನೀಡುತ್ತಿರುವುದು ಕಾಂಗ್ರೆಸ್ ಎಂದು ಆರೋಪಿಸಿದರು. ಇದೇ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕಾಂಗ್ರೆಸ್ ನಾಯಕ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ರನ್ನ ಬಿಜೆಪಿಗೆ ಸೇರಲು ಆಹ್ವಾನ ನೀಡಿರೋದಾಗಿ ಹೇಳಿದರು.