Asianet Suvarna News Asianet Suvarna News

ಆಕ್ಷನ್ ಕಿಂಗ್ ವಿರುದ್ಧ ಮತ್ತೇ ಸಿಡಿದ ಶ್ರುತಿ ಹರಿಹರನ್

Oct 21, 2018, 9:55 PM IST

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಇಂದು ಸುದ್ದಿಗೋಷ್ಠಿ ನಡೆಸಿ ಮತ್ತೇ ಕಿಡಿಕಾರಿದ್ದಾರೆ. ಮಲ್ಲೇಶ್ವರಂ ರೇಣುಕಾಂಬ ಥಿಯೇಟರ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವರು ನಾನು ಅರ್ಜುನ್ ಸರ್ಜಾ ವಿರುದ್ಧ ಮಾಡಿರುವ ಆರೋಪಕ್ಕೆ ಬದ್ಧವಾಗಿದ್ದೇನೆ ಎಂದರು. ಇನ್ನು ಘಟನೆ ನಡೆದಾಗ ನನಗೆ ಹೇಳಿಕೊಳ್ಳುವಷ್ಟು ಧೈರ್ಯ ಇರಲಿಲ್ಲ. ಈಗ ಧೈರ್ಯ ಬಂದಿದೆ. ಹೀಗಾಗಿ ನಾನು ಮಾಧ್ಯಮದ ಮುಂದೆ ಬಂದಿದ್ದೇನೆ. ಇದೇ ವೇಳೆ ನಾನು ಪಬ್ಲಿಸಿಟಿಗೋಸ್ಕರ ಸರ್ಜಾ ವಿರುದ್ಧ ಆರೋಪ ಮಾಡುತ್ತಿಲ್ಲ ಎಂದರು.