ಏಪ್ರಿಲ್ ಕೊನೆಯ ವಾರದಲ್ಲಿ ಎಸ್'ಎಸ್'ಎಲ್'ಸಿ ಹಾಗೂ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ವಿಜಯಪುರ (ನ.19): ಏಪ್ರಿಲ್ ಕೊನೆಯ ವಾರದಲ್ಲಿ ಎಸ್'ಎಸ್'ಎಲ್'ಸಿ ಹಾಗೂ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಕಲಿಯಲು ಆದೇಶ ಹೊರಡಿಸಲು ಚಿಂತನೆ ನಡೆದಿದೆ. ಶಿಕ್ಷಕ ಪ್ರೇಮಿ ವರ್ಗಾವಣೆ ನೀತಿ ಜಾರಿಗೊಳಿಸಲು ಇಲಾಖೆ ಸಿದ್ಧತೆ ನಡೆಸಿದೆ. ಟಿಪ್ಪು ಸುಲ್ತಾನ ಜಯಂತಿ ಆಚರಣೆಯನ್ನು ಕೆಲ ವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಸರಳ ರೀತಿಯಲ್ಲಿ ಆಚರಣೆ ಮಾಡಲು ಸರಕಾರ ಮುಂದಾಗಿದೆ ಎಂದು ತನ್ವೀರ್ ಸೇಠ್ ಹೇಳಿದ್ದಾರೆ.
