ಇಂದು ಎಸ್ಎಸ್'ಎಲ್ಸಿ  ಫಲಿತಾಂಶ ಪ್ರಕಟಗೊಂಡಿದ್ದು ಶೇ.71 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದು ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಬೆಂಗಳೂರು ಹಾಗೂ ಮೈಸೂರಿನ ಇಬ್ಬರು ವಿದ್ಯಾರ್ಥಿಗಳು ಪೂರ್ಣ 625 ಅಂಕ ಪಡೆದುಕೊಂಡಿರುವುದು ವಿಶೇಷ.

ಕಾರವಾರ(ಮೇ.07): ಎಸ್ಎಸ್'ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯಲ್ಲಿ ನಡೆದಿದೆ.
ಕಾರವಾರ ನಗದರ ಹಿಂದೂ ಹೈಸ್ಕೂಲ್ ವಿದ್ಯಾರ್ಥಿನಿ ಶೇಪಾಲಿ ಉಲ್ಲಾಸ ಪಡವಳಕರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ತಾಕುಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಎಸ್ಎಸ್'ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಶೇ.71 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದು ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಬೆಂಗಳೂರು ಹಾಗೂ ಮೈಸೂರಿನ ಇಬ್ಬರು ವಿದ್ಯಾರ್ಥಿಗಳು ಪೂರ್ಣ 625 ಅಂಕ ಪಡೆದುಕೊಂಡಿರುವುದು ವಿಶೇಷ.

Add Asianetnews Kannada as a Preferred SourcegooglePreferred