ಕುಳಿತುಕೊಳ್ಳುವ ಜಾಗದ ವಿಷಯಕ್ಕೆ 2 ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಪಿಯುಸಿ ವಿದ್ಯಾರ್ಥಿಗಳು ಹರ್ಷನನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ.
ಬೆಂಗಳೂರು(ಫೆ.27): ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆಯಲ್ಲಿ ಎಸ್'ಎಸ್ಎಲ್'ಸಿ ವಿದ್ಯಾರ್ಥಿಯೊಬ್ಬ ಕೊಲೆಯಾಗಿರುವ ಘಟನೆ ಯಲಹಂಕದಲ್ಲಿ ನಡೆದಿದೆ.
ವಿದ್ಯಾರ್ಥಿ ಹರ್ಷ' ಕೊಲೆಯಾಗಿರುವ ವಿದ್ಯಾರ್ಥಿ.ಯಲಹಂಕದ ಸಂಯುಕ್ತ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ನಡೆಯುತ್ತಿದ್ದ ವೇಳೆ ಕುಳಿತುಕೊಳ್ಳುವ ಜಾಗದ ವಿಷಯಕ್ಕೆ 2 ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಪಿಯುಸಿ ವಿದ್ಯಾರ್ಥಿಗಳು ಹರ್ಷನನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
