ಬಿಜೆಪಿ ಮುಖಂಡರು ವೇದಿಕೆ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ವೇದಿಕೆಯೇ ಕುಸಿದು ಬಿದ್ದು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 

ಲಕ್ನೋ : ಉತ್ತರ ಪ್ರದೇಶದಲ್ಲಿ ಬಿಜೆಪಿ ಮುಖಂಡರು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ವೇದಿಕೆ ಕುಸಿದಿದ್ದು, ಈ ವೇಳೆ ಹಲವರು ಗಾಯಗೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಲ್ಲಿನ ಬಿಜೆಪಿ ಮುಖಂಡರು ಆಯೋಜಿಸಿದ್ದ ಹೋಲಿ ಮಿಲನ್ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದಿದ್ದು ಬಿಜೆಪಿ ಕಿಸಾನ್ ಮೋರ್ಚಾ ಮುಖಂಡ ಅವದೇಶ್ ಯಾದವ್ ಸೇರಿ ಹಲವರು ಗಾಯಗೊಂಡಿದ್ದಾರೆ. 

ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯ ನಾಯಕರು ಸೇರಿದ್ದುದೆ ಇದಕ್ಕೆ ಕಾರಣವಾಗಿದೆ. ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದಂತೆ ಏಕಾ ಏಕಿ ವೇದಿಕೆ ಕುಸಿದು ಬಿದ್ದಿದೆ. 

ಈ ಹಿಂದೆಯೂ ಕೂಡ ಉತ್ತರ ಪ್ರದೇಶದಲ್ಲಿ ಹಲವು ವೇದಿಕೆ ಕುಸಿತದ ಪ್ರಕರಣಗಳು ವರದಿಯಾಗಿವೆ. 

2017ರಲ್ಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅಲಹಾಬಾದ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಅಖಿಲೇಶ್ ಯಾದವ್ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿದ್ದ ವೇದಿಕೆ ಕುಸಿದು ಬಿದ್ದು, ಹಲವರು ಗಾಯಗೊಂಡಿದ್ದರು.