ಡಿಎಂಕೆ ಮುಖಂಡ ಎಂ.ಕೆ ಸ್ಟಾಲಿನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಚೆನ್ನೈ : ಡಿಎಂಕೆ ಮುಖಂಡ ಎಂ.ಕೆ. ಸ್ಟಾಲಿನ್ ಅವರನ್ನು ಆಸ್ಪತ್ರೆಗೆ ದಾಖಲಿಸಿ. ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

 ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಬಡಲತೊಡೆಯಲ್ಲಿ ಉಂಟಾದ ಗಡ್ಡೆಯನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆಯಲಾಗಿದೆ. 

ಸದ್ಯ ಅವರು ಸುಧಾರಿಸಿಕೊಳ್ಳುತ್ತಿದ್ದು ಗುರುವಾರ ಮಧ್ಯಾಹ್ನದ ವೇಳೆಗೆ ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. 

ಸ್ಟಾಲಿನ್ ಅವರ ತಂದೆ ಕರುಣಾನಿಧಿ ನಿಧನದ ಬಳಿಕ ಡಿಎಂಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಳೆದ ಆಗಸ್ಟ್ 7ರಂದು ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.