Asianet Suvarna News Asianet Suvarna News

ಕೇಂದ್ರ ಸರ್ಕಾರದ ನಿಲುವು ವಿರೋಧಿಸಿದ ರಾಜ್ಯ ಬಿಜೆಪಿ ನಾಯಕರು

 ಕೇಂದ್ರದ ನಿಲುವಿಗೆ ಬಿಜೆಪಿ ಮುಖಂಡರು ವಿರೋಧಿಸಿದ್ದು, ಈ ಬಗ್ಗೆ ಕೇಂದ್ರ ಸಚಿವರ ಭೇಟಿಯಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಡಕೆ ಹಾನಿಕಾರ ಎನ್ನುವ ಹೇಳಿಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

State BJP Leaders Meets Union Minister Harshvardhan Over Areca Issue
Author
Bengaluru, First Published Jul 19, 2019, 10:22 AM IST

ನವದೆಹಲಿ [ಜು.19] : ಅಡಕೆ ಹಾನಿಕಾರಕ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದನ್ನು ರಾಜ್ಯ ಬಿಜೆಪಿ ಖಂಡಿಸಿದೆ. ರಾಜ್ಯದ ಬಿಜೆಪಿ ಸಂಸದರ ನಿಯೋಗವು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ರನ್ನು ಭೇಟಿಯಾಗಿ ಈ ಕುರಿತು ತನ್ನ ಆಕ್ಷೇಪ ವ್ಯಕ್ತಪಡಿಸಿದೆ.

ಯಾವುದೇ ವೈಜ್ಞಾನಿಕ ಕಾರಣಗಳಿಲ್ಲದೆ ಕೇವಲ ಸುಪ್ರೀಂ ಕೋರ್ಟಿನಲ್ಲಿರುವ ಅಫಿಡವಿಟ್‌ ಆಧಾರದಲ್ಲಿ ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎನ್ನುವ ಉತ್ತರವನ್ನು ಸಂಸತ್ತಿನಲ್ಲಿ ನೀಡಲಾಗಿದೆ. ಕೇಂದ್ರದ ಈ ನಿಲುವು ರಾಜ್ಯದ ಅಡಕೆ ಬೆಳೆಗಾರರ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಸಂಸದರು ಆರೋಗ್ಯ ಸಚಿವರ ಗಮನಕ್ಕೆ ತಂದರು.

ಐಸಿಎಆರ್‌-ಸಿಪಿಸಿಆರ್‌ಐ ಸಂಸ್ಥೆಯು ಅಡಕೆ ಸೇವನೆ ಆರೋಗ್ಯಕ್ಕೆ ಹಾನಿ ಮಾಡುವುದಿಲ್ಲ ಎಂದು ಖಚಿತಪಡಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಡಕೆ ಬೆಳೆಗಾರರ ಹಿತ ಕಾಯುವ ಭರವಸೆ ಮೂಡಿಸಬೇಕು. ಈ ಸಂಬಂಧ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿಡವಿಟ್‌ ಹಿಂಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ಸಂಸದರ ನಿಯೋಗ ಒತ್ತಾಯಿಸಿದೆ. ನಿಯೋಗದಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್‌ ಕುಮಾರ್‌ ಕಟೀಲು, ಜಿ.ಎಂ. ಸಿದ್ದೇಶ್ವರ, ಎ. ನಾರಾಯಣಸ್ವಾಮಿ, ಅಣ್ಣಾಸಾಹೇಬ್‌ ಜೊಲ್ಲೆ ಇದ್ದರು.

Follow Us:
Download App:
  • android
  • ios