ಬೆಂಗಳೂರು :  ಕೊ‌ನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಅಕ್ಟೋಬರ್ 10 ರಂದು ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಹೆಚ್ಚಿದೆ.   ಪರಿಷತ್ ಸದಸ್ಯರ ಆಯ್ಕೆ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. 

ಲೋಕಸಭೆ ಚುನಾವಣೆಗೂ ಆರ್ಥಿಕ ಸಂಪನ್ಮೂಲ ಹಾಗೂ ಪಕ್ಷ ಸಂಘಟನೆಗೆ ಒತ್ತು ನೀಡುವ ಉದ್ದೇಶದಿಂದ ಶೀಘ್ರ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ. ಅಕ್ಟೋಬರ್ 8 ಅಥವಾ 10 ರಂದು ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಪ್ಲಾನ್ ಮಾಡಿದೆ. 

ಖಾಲಿ ಇರೋ ಆರು ಸ್ಥಾನಗಳ ಜೊತೆ ನಾಲ್ವರು ಸಚಿವರನ್ನ ಸಚಿವ ಸ್ಥಾನದಿಂದ ರಾಜೀನಾಮೆ ಕೊಡಿಸಿ  10 ಸ್ಥಾನ ತುಂಬಲು ಕೈ ನಾಯಕರು  ಕಸರತ್ತು ಆರಂಭಿಸಿದ್ದಾರೆ. ಇದೇ ತಿಂಗಳು ಕೊನೆಯ ವಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪರಮೇಶ್ವರ್ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಈ ಸಂಬಂಧ ಚರ್ಚಿಸಲಿದ್ದಾರೆ.

ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂತ್ರಿ ಸ್ಥಾನ ನೀಡಲು ತೀರ್ಮಾನ ಮಾಡಲಿದ್ದು, ಲೋಕಸಭೆ ಚುನಾವಣೆಗೆ ಆರ್ಥಿಕ ಸಂಪನ್ಮೂಲ ಒದಗಿಸುವ ಶಾಸಕರಿಗೆ ಸಂಪುಟದಲ್ಲಿ ಮಣೆ ಹಾಕುವ ಸಾಧ್ಯತೆ ಹೆಚ್ಚಾಗಿದೆ. 

ಸಚಿವ ಸ್ಥಾನದ ಆಕಾಂಕ್ಷಿಗಳು

ರಾಮಲಿಂಗ ರೆಡ್ಡಿ
ಸಿ.ಎಸ್ ಶಿವಳ್ಳಿ, ಎಂ.ಟಿ.ಬಿ ನಾಗರಾಜ್
ಅಮರೇಗೌಡ ಬೈಯಪುರ್
ತುಕಾರಾಂ
ನಾಗೇಂದ್ರ
ಆನಂದ್ ಸಿಂಗ್
ಎಂ.ಬಿ ಪಾಟೀಲ್
ಬಿ.ಸಿ ಪಾಟೀಲ್
ಡಾ. ಸುಧಾಕರ್
ನಾಗೇಶ್ ಪಕ್ಷೇತರ ಶಾಸಕ
ಶಿವರಾಮ್ ಹೆಬ್ಬಾರ್ 
ಬಿ.ಕೆ ಸಂಗಮೇಶ್ವರ್