‘ಕೈ’ ಸಚಿವರ ಪಟ್ಟಿ ಸಿದ್ದತೆಗೆ ರಾಹುಲ್ ಸಭೆ..!

ನವದೆಹಲಿ(ಜೂ.5): ಬಹಳ ಹಗ್ಗ ಜಗ್ಗಾಟದ ಬಳಿಕ ಕಾಂಗ್ರೆಸ್ ತನ್ನ ಸಚಿವರ ಪಟ್ಟಿ ಸಿದ್ದಪಡಿಸಿದ್ದು, ಈ ಕುರಿತು ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಸಚಿವ ಸ್ಥಾನದ ಪಟ್ಟಿ ಅಂತಿಮವಾಗಿದ್ದು, ರಾಜ್ಯ ಕಾಂಗ್ರೆಸ್ ಮುಖಂಡರಾದ ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ. ಜಿ. ಪರಮೇಶ್ವರ್, ಮಲ್ಲಿಕಾಜುರ್ಜುನ್ ಖರ್ಗೆ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸಭೆಯಲ್ಲಿ ಭಾಗವಹಿಸಿದ್ದಾರೆ.

ನವದೆಹಲಿಯ ತುಘಲಕ್ ಲೇನ್ ನಲ್ಲಿರುವ ರಾಹುಲ್ ಗಾಂಧಿ ನಿವಾಸದಲ್ಲಿ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಸಚಿವರ ಪಟ್ಟಿ ಇಂದು ಅಂತಿಮಗೊಳ್ಳಲಿದೆ. ಯಾವುದೇ ಭಿನ್ನಮತಕ್ಕೆ ಅವಕಾಶ ಇಲ್ಲದಂತೆ ಸಚಿವರ ಪಟ್ಟಿ ಸಿದ್ದಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Comments 0
Add Comment