ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭ ನೇತೃತ್ವದ ಸಮಿತಿ ಕರ್ನಾಟಕ ಕಾನೂನು ಆಯೋಗಕ್ಕೆ ನೀಡಿದ್ದ ವರದಿ ಆಧರಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆ ಪ್ರಕಾರ 1978ರ ಕಾಯ್ದೆಯ ಸೆಕ್ಷನ್ 3 ಹಾಗೂ 4 ಕ್ಕೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಯಾವುದೇ ಅಧಿಕಾರಿ ಹಿಂಬಡ್ತಿ ಹೊಂದದಂತೆ ತಡೆಯಲು ಉದ್ದೇಶಿಸಲಾಗಿದೆ.

ಬೆಂಗಳೂರು(ಆ.07): ಬಡ್ತಿ ಮೀಸಲಾತಿ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ್ದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಬೆಂಗಳೂರಿನ ವಿಧಾನಸೌಧದಲ್ಲಿಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನಲೆಯಲ್ಲಿ ಸುಧೀರ್ಘ ಚರ್ಚೆ ನಡೆಯಿತು. ಈ ಚರ್ಚೆಯ ವೇಳೆ ಇದೇ 9ರಂದು ರಾಜ್ಯ ಸರ್ಕಾರ ಅಫಿಡವಿಟ್ ಸಲ್ಲಿಸಬೇಕಿರುವ ಹಿನ್ನಲೆಯಲ್ಲಿ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಿ ನಾಳೆಯೇ ರಾಜ್ಯಪಾಲರಿಗೆ ಕಳುಹಿಸಲು ನಿರ್ಧರಿಸಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭ ನೇತೃತ್ವದ ಸಮಿತಿ ಕರ್ನಾಟಕ ಕಾನೂನು ಆಯೋಗಕ್ಕೆ ನೀಡಿದ್ದ ವರದಿ ಆಧರಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆ ಪ್ರಕಾರ 1978ರ ಕಾಯ್ದೆಯ ಸೆಕ್ಷನ್ 3 ಹಾಗೂ 4 ಕ್ಕೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಯಾವುದೇ ಅಧಿಕಾರಿ ಹಿಂಬಡ್ತಿ ಹೊಂದದಂತೆ ತಡೆಯಲು ಉದ್ದೇಶಿಸಲಾಗಿದೆ. ಇಂಧನ, ನೀರಾವರಿ ಹಾಗೂ ಲೋಕೋಪಯೋಗಿ ಇಲಾಖೆಯ ಸುಮಾರು 100ಕ್ಕೂ ಹೆಚ್ಚು ಅಧಿಕಾರಿಗಳು ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ತೀರ್ಮಾನದಿಂದ ನಿಟ್ಟುಸಿರು ಬಿಡುವಂತಾಗಿದೆ.

(ಸಂಗ್ರಹ ಚಿತ್ರ)