1ರಿಂದ 10ನೇ ತರಗತಿಯವರೆಗೆ ಮುಂದಿನ ವರ್ಷದಿಂದ ಪರಿಷ್ಕೃತ ಪಠ್ಯ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಪಠ್ಯ ಬದಲಾವಣೆಗೆ ಒಲವು ವ್ಯಕ್ತಪಡಿಸಿದ್ದು, ಇದೀಗ ಸರ್ಕಾರ ಮತ್ತು ವಿಪಕ್ಷ ಬಿಜೆಪಿ ಮಧ್ಯೆ ಮತ್ತೆ ತಿಕ್ಕಾಟಕ್ಕೆ ಕಾರಣವಾಗಿದೆ.
ಬೆಂಗಳೂರು(ಡಿ.16): 1ರಿಂದ 10ನೇ ತರಗತಿಯವರೆಗೆ ಮುಂದಿನ ವರ್ಷದಿಂದ ಪರಿಷ್ಕೃತ ಪಠ್ಯ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಪಠ್ಯ ಬದಲಾವಣೆಗೆ ಒಲವು ವ್ಯಕ್ತಪಡಿಸಿದ್ದು, ಇದೀಗ ಸರ್ಕಾರ ಮತ್ತು ವಿಪಕ್ಷ ಬಿಜೆಪಿ ಮಧ್ಯೆ ಮತ್ತೆ ತಿಕ್ಕಾಟಕ್ಕೆ ಕಾರಣವಾಗಿದೆ.
ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರ ಆಕ್ಷೇಪ
2018-19ನೇ ಸಾಲಿನಲ್ಲಿ ಪರಿಷ್ಕೃತ ಪಠ್ಯ ಜಾರಿಗೊಳಿಸುವುದಾಗಿ ಕಳೆದ ಬೆಳಗಾವಿ ಅಧಿವೇಶನದಲ್ಲಿ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದರು. ಆದರೆ ಈಗ ಮುಂದಿನ ವರ್ಷದಿಂದಲೇ 1ರಿಂದ 10ನೇ ತರಗತಿಯವರೆಗೆ ಶಾಲಾ ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಜನವರಿ 15ರೊಳಗೆ ತನ್ನ ವರದಿ ಸಲ್ಲಿಸಲಿದೆ. .ಇದಾದ ಬಳಿಕ ಪರಿಶೀಲಿಸಿ ಸರ್ಕಾರ ಮುದ್ರಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ.
ತರಾತುರಿಯಲ್ಲಿ ಸಿಲೆಬಸ್ ಬದಲಿಸಲು ಹೊರಟ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಆಕ್ಷೇಪ ಎತ್ತಿದೆ. ಅಷ್ಟೇ ಅಲ್ಲದೆ ಪರಿಷ್ಕೃತ ಪಠ್ಯದಲ್ಲಿ ಅಹಿಂದ ಪರ ಅಂಶ ಸೇರಿಸಲಾಗುತ್ತಿದೆ ಎಂದು ಆರೋಪಿಸಿದ ಬಿಜೆಪಿ, ಸಾರ್ಜಜನಿಕ ಅಭಿಪ್ರಾಯ ಪಡೆದ ಬಳಿಕವೇ ಪರಿಷ್ಕೃತ ಪಠ್ಯ ಜಾರಿಗೊಳಿಸುವಂತೆ ಆಗ್ರಹಿಸಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯ ಕೇಸರೀಕರಣಗೊಳಿಸಲಾಗಿದೆ ಎನ್ನುವ ಆರೋಪದ ಮೇಲೆ ಕಿಮ್ಮನೆ ರತ್ನಾಕರ ಅವರು ಶಿಕ್ಷಣ ಸಚಿವರಾಗಿದ್ದ ಪಠ್ಯ ಪರಿಷ್ಕರಣೆಗೆ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆದರೆ ಈಗ ಪರಿಷ್ಕೃತ ಪಠ್ಯಕ್ರಮದಲ್ಲಿ ಅಹಿಂದ ವಿಚಾರ ಕೇಳಿ ಬರುತ್ತಿದೆ. ಒಟ್ಟಿನಲ್ಲಿ ಸಿಲೆಬಸ್ ಬದಲಾವಣೆ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ.
