ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು.
ಬೆಂಗಳೂರು(ಸೆ.29): ದಸರಾ ಕೊಡುಗೆಯಾಗಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುವ ತುಟ್ಟಿ ಭತ್ಯೆ ಹೆಚ್ಚಳ ಕುರಿತ ಸರ್ಕಾರಿ ಆದೇಶ ಅಕ್ಟೋಬರ್ 3ರಂದು ಪ್ರಕಟವಾಗುವ ಸಾಧ್ಯತೆ ಇದೆ.
ಸರ್ಕಾರ ಈ ಬಾರಿ ಶೇ.1.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಮಾಡಲು ಎಲ್ಲಾ ಸಿದ್ಧತೆ ನಡೆಸಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ದಸರಾ ಮುಗಿಸಿ ಮಂಗಳವಾರ ವಾಪಸ್ಸಾಗುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭತ್ಯೆ ಹೆಚ್ಚಳ ಕಡತಕ್ಕೆ ಸಹಿ ಹಾಕಿ ಅನುಮೋದಿಸಲಿದ್ದಾರೆ ಎನ್ನಲಾಗಿದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು. ಹೀಗಾಗಿ ಸರ್ಕಾರ ನೌಕರರಿಗೆ ಶೇ. 3ರಷ್ಟು ತುಟ್ಟಿ ಹೆಚ್ಚಳ ಮಾಡಬೇಕೆಂದು ನೌಕರರ ಸಂಘಟನೆಗಳು ಒತ್ತಾಯ ಮಾಡಿದ್ದವು. ಇದನ್ನು ಆಲಿಸಿದ್ದ ಸಿಎಂ ಸಿದ್ದರಾಮಯ್ಯ, ಶೇ.1.5ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿ, ಪ್ರಕ್ರಿಯೆ ಆರಂಭಿಸಲು ಸೂಚಿಸಿದ್ದರು.
