* ಡಿನೋಟಿಫಿಕೇಷನ್ ಪ್ರಕರಣವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ ಸರ್ಕಾರ* ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕಾನೂನು ತಂತ್ರಗಾರಿಕೆ* ಎಸಿಬಿ ದಾಖಲಿಸಿರುವ FIR ರದ್ದುಗೊಳಿಸಲು ಯಡಿಯೂರಪ್ಪ ಅರ್ಜಿ* ರಿಟ್ ಅರ್ಜಿ ಪ್ರಕರಣದಲ್ಲಿ ವಾದ ಮಾಡಲು ನುರಿತ ವಕೀಲರ ನೇಮಕ* ಸಿಎಂ ಆಪ್ತ ಹಾಗೂ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಕುಮಾರ್ ವಾದ?* ವಿಶೇಷ ಅಭಿಯೋಜಕರನ್ನಾಗಿ ನೇಮಿಸುವಂತೆ ಎಸಿಬಿ ಡಿಜಿಪಿ ಎಂ.ಎನ್.ರೆಡ್ಡಿ ಪತ್ರ
ಬೆಂಗಳೂರು(ಆ. 22): ಶಿವರಾಮ ಕಾರಂತ ಬಡಾವಣೆಯ ಡಿ ನೋಟಿಫಿಕೇಷನ್ ಪ್ರಕರಣವನ್ನು ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೆ ಅಣಿಯಾಗಿ ತಂತ್ರಗಾರಿಕೆ ಮುಂದುವರೆಸಿದೆ. ಬಿಜೆಪಿಗೆ ತಿರುಗೇಟು ನೀಡಲು ಎಲ್ಲಾ ರೀತಿಯ ಕಸರತ್ತು ಆರಂಭಿಸಿದೆ. ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಲು ಬಿಎಸ್'ವೈ ರಿಟ್ ಅರ್ಜಿ ದಾಖಲಿಸಿದ್ದಾರೆ. ಅರ್ಜಿ ಪ್ರಕರಣದಲ್ಲಿ ಸಮರ್ಥವಾಗಿ ವಾದ ಮಾಡಲು ಸಿದ್ದರಾಮಯ್ಯ ಅವರ ನಿಕಟವರ್ತಿ ಹಾಗೂ ರಾಜ್ಯದ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಕುಮಾರ್ ಅವರನ್ನ ನೇಮಿಸಲು ಚಿಂತನೆ ನಡೆಸಿದೆ. ಹೈಕೋರ್ಟ್'ನಲ್ಲಿ ಸಮರ್ಥವಾಗಿ ವಾದ ಮಾಡಲು ರಾಜ್ಯದ ಮಾಜಿ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮಕುಮಾರ್ ಮತ್ತು ಸೀನಿಯರ್ ಕೌನ್ಸಿಲ್'ಗಳನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಎಸಿಬಿ ಡಿಜಿಪಿ ಎಂ.ಎನ್.ರೆಡ್ಡಿ ಪತ್ರ ಬರೆದಿದ್ದಾರೆ. ವಿವಿಧ ಪ್ರಕರಣಗಳಲ್ಲಿ ರಾಜ್ಯ ಸರ್ಕಾರವನ್ನು ಹಲವು ಬಾರಿ ಪ್ರತಿನಿಧಿಸಿ ಅನುಭವ, ಸಾಮರ್ಥ್ಯ ಹೊಂದಿರುವ ಪ್ರೊ.ರವಿವರ್ಮಕುಮಾರ್ ಅವರನ್ನೇ ಯಡಿರಪ್ಪ ಅವರ ಪ್ರಕರಣದಲ್ಲಿ ವಾದ ಮಂಡಿಸಲು ನೇಮಿಸುವ ಸಾಧ್ಯತೆಗಳಿವೆ ಎಂದು ಎಸಿಬಿ ಮೂಲಗಳು ತಿಳಿಸಿವೆ.
