ಈ ಹಗರಣಗಳ ಬಗ್ಗೆ ಈಗಾಗಲೇ ವರದಿ ಕೇಳಿದ್ದೇನೆ, ವರದಿ ಬಂದ ಬಳಿಕ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದೂ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಬೆಂಗಳೂರು (ಜ.17): ರಾಜ್ಯದ 17 ವಿಶ್ವವಿದ್ಯಾಲಯಗಳಿಂದ ಸುಮಾರು 500 ಕೋಟಿ ರೂಪಾಯಿಗಳಿಗೂ ಹೆಚ್ಚು ಹಗರಣ ನಡೆದಿದೆ ಎಂದು ಸ್ವತಃ ಉನ್ನತ ಶಿಕ್ಷಣ ಸಚಿವರಾಗಿರುವ ಬಸವರಾಜ ರಾಯರೆಡ್ಡಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಅವರು, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ನಡೆದಿರುವ ಹಗರಣಗಳ ಬಗ್ಗೆ ವೈಯಕ್ತಿಕವಾಗಿ ಒಪ್ಪಿಕೊಂಡಿದ್ದಾರೆ.
ಈ ಹಗರಣಗಳ ಬಗ್ಗೆ ಈಗಾಗಲೇ ವರದಿ ಕೇಳಿದ್ದೇನೆ, ವರದಿ ಬಂದ ಬಳಿಕ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದೂ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.