ರಾಜ್ಯ ಸರ್ಕಾರ ತಕ್ಷಣವೇ ಕಂಬಳ ಪರ ಸುಗ್ರೀವಾಜ್ಞೆ ಹೊರಡಿಸಬೇಕು, ಜಲ್ಲಿಕಟ್ಟುವಿಗೆ ಬೆಂಬಲಿಸಿದಂತೆ ಕೇಂದ್ರ ಸರ್ಕಾರ ಕಂಬಳಕ್ಕೂ ಬೆಂಬಲ ನೀಡಬೇಕು. ಹೀಗಾಗಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಅಂತ ವಾಟಾಳ್ ಎಚ್ಚರಿಸಿದ್ದಾರೆ
ಬೆಂಗಳೂರು (ಜ.25): ತಮಿಳುನಾಡಿನ ಜಲ್ಲಿಕಟ್ಟಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ. ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಅನುಮತಿ ನೀಡಲು ಮಲತಾಯಿ ಧೋರಣೆ ಅನುಸರಿಸುತ್ತಿದೆ, ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕೇಂದ್ರದ ಈ ಧೋರಣೆಗೆ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಕಂಬಳಕ್ಕೆ ಅನುಮತಿ ನೀಡಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಸರ್ಕಾರ ತಕ್ಷಣವೇ ಕಂಬಳ ಪರ ಸುಗ್ರೀವಾಜ್ಞೆ ಹೊರಡಿಸಬೇಕು, ಜಲ್ಲಿಕಟ್ಟುವಿಗೆ ಬೆಂಬಲಿಸಿದಂತೆ ಕೇಂದ್ರ ಸರ್ಕಾರ ಕಂಬಳಕ್ಕೂ ಬೆಂಬಲ ನೀಡಬೇಕು. ಹೀಗಾಗಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಅಂತ ವಾಟಾಳ್ ಎಚ್ಚರಿಸಿದ್ದಾರೆ.
ಫೆಬ್ರವರಿ 18 ಕ್ಕೆ ರಾಜ್ಯ ಬಂದ್ ಮಾಡಲಾಗುವುದು ಎಂದೂ ವಾಟಾಳ್ ನಾಗರಾಜ್ ಈ ಸಂದರ್ಭದಲ್ಲಿ ಹೇಳಿದ್ದಾರೆ
