ಬಿಜೆಪಿ ಪರಿವರ್ತನಾ ಯಾತ್ರೆ ರಥಕ್ಕೆ ಕಲ್ಲು ತೂರಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು (ನ.03): ಬಿಜೆಪಿ ಪರಿವರ್ತನಾ ಯಾತ್ರೆ ರಥಕ್ಕೆ ಕಲ್ಲು ತೂರಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ಬಿಜೆಪಿ ಉಚ್ಚಾಟಿತ ಮುಖಂಡ ಚೌದರಿ ನಾಗೇಶ್ ಬೆಂಬಲಿಗರಿಂದ ಈ ದಾಳಿ ನಡೆದಿದೆ. ಬಾಣಸಂದ್ರ ಬಳಿ ಯಡಿಯೂರಪ್ಪ ಕಾರು ನಿಲ್ಲಿಸದಕ್ಕೆ ಆಕ್ರೋಶಗೊಂಡ ನಾಗೇಶ್ ಬೆಂಬಲಿಗರು ಯಾತ್ರೆಗೆ ಕಲ್ಲು ತೂರಿದ್ದಾರೆ. ಬಿಜೆಪಿಯ ಪರಿವರ್ತನಾ ರ್ಯಾಲಿಗೆ ಜನರು ನಿರಾಸಕ್ತಿ ತೋರಿಸುತ್ತಿದ್ದಾರೆ ಎಂಬ ಆರೋಪದ ಮಧ್ಯೆಯೇ ಈ ಘಟನೆ ನಡೆದಿದೆ.
