ಬ್ಯಾಂಕಿಂಗ್ ಸೇವೆಗಳಿಗೆ ಸೆ.9 ಹಾಗೂ 10 ರಂದು ನಿಗದಿಯಾಗಿರುವ ಪರೀಕ್ಷೆಗಳನ್ನು ತಡೆಹಿಡಿಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದೆ. ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯಾಯ ರಾಜ್ಯಗಳ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಪ್ರಾಧಿಕಾರವು ಆಗ್ರಹಿಸಿದೆ.

ಬೆಂಗಳೂರು: ಬ್ಯಾಂಕಿಂಗ್ ಸೇವೆಗಳಿಗೆ ಸೆ.9 ಹಾಗೂ 10 ರಂದು ನಿಗದಿಯಾಗಿರುವ ಪರೀಕ್ಷೆಗಳನ್ನು ತಡೆಹಿಡಿಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದೆ.

ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯಾಯ ರಾಜ್ಯಗಳ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಪ್ರಾಧಿಕಾರವು ಆಗ್ರಹಿಸಿದೆ.

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ನೇಮಕಾತಿಗಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (IBPS) ಪರೀಕ್ಷೆಗಳನ್ನು ನಡೆಸುತ್ತದೆ. ಹಾಲಿ ಕೇಂದ್ರಿಕೃತ ವ್ಯವಸ್ಥೆಯು ಸ್ಥಳೀಯರ ಹಿತಾಸಕ್ತಿಗೆ ವಿರುದ್ಧವಾಗಿದೆ ಹಾಗೂ ಕನ್ನಡಿಗೇತರರಿಗೆ ಹೆಚ್ಚು ಸಹಕಾರಿಯಾಗಿದೆ ಎಂದು ಪ್ರಾಧಿಕಾರವು ಹೇಳಿದೆ.

ಈ ಪರೀಕ್ಷೆಯನ್ನು ತಡೆಯದಿದ್ದರೆ, ಸಾವಿರಾರು ಕನ್ನಡಿಗೇತರರು ರಾಜ್ಯದ ಗ್ರಾಮೀಣ ಬ್ಯಾಂಕುಗಳಲ್ಲಿ ಉದ್ಯೋಗವನ್ನು ಪಡೆಯುತ್ತಾರೆ. ಇಲ್ಲಿನ ಜನರು ಹಾಗೂ ರೈತರಿಗೆ ಬ್ಯಾಂಕುಗಳಲ್ಲಿ ವ್ಯವಹರಿಸಲು ಕಷ್ಟವಾಗುತ್ತದೆ, ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದಲಿಂಗಯ್ಯ ಸಿಎಂಗೆ ಪತ್ರದಲ್ಲಿ ಹೇಳಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರಕ್ಕೆ ಆಗ್ರಹಿಸಬೇಕೆಂದು ಸಿದ್ದಲಿಂಗಯ್ಯ ಸಿಎಂಗೆ ಮನವಿ ಮಾಡಿದ್ದಾರೆ.