ಎಐಡಿಎಂಕೆ ಮುಖ್ಯಸ್ಥೆ ವಿ.ಕೆ ಶಶಿಕಲಾರವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವುದನ್ನು ತಡೆಹಿಡಿಯಬೇಕೆಂದು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ನವದೆಹಲಿ (ಫೆ.06): ಎಐಡಿಎಂಕೆ ಮುಖ್ಯಸ್ಥೆ ವಿ.ಕೆ ಶಶಿಕಲಾರವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವುದನ್ನು ತಡೆಹಿಡಿಯಬೇಕೆಂದು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಹಾಗೂ ಶಶಿಕಲಾ ಅಕ್ರಮ ಆಸ್ತಿ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಕರಣದ ತೀರ್ಪನ್ನು ಸುಪ್ರೀಂಕೋರ್ಟ್ ವಾರದೊಳಗೆ ನೀಡಲಿರುವ ಹಿನ್ನೆಲೆಯಲ್ಲಿ ಸತ್ತ ಪಂಚಾಯತ್ ಇಯಾಕ್ಕಂ ಎನ್ನುವ ಎನ್ ಜಿಓ ಜನರಲ್ ಸೆಕ್ರೆಟರಿ ಸೆಂಥಿಲ್ ಕುಮಾರ್ ಎನ್ನುವವರು ಪಿಐಎಲ್ ಸಲ್ಲಿಸಿದ್ದಾರೆ.

ನಾಳೆ ವಿಚಾರಣೆ ನಡೆಯಲಿರುವ ಸಾಧ್ಯತೆಯಿದೆ. ಒಂದು ವೇಳೆ ಶಶಿಕಲಾ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿ, ರಾಜಿನಾಮೆ ನೀಡಲು ಒತ್ತಾಯಿಸಿದರೆ ತಮಿಳುನಾಡಿನಾದ್ಯಂತ ಸಂಘರ್ಷಕ್ಕೆ ಕಾರಣವಾಗಬಹುದು. ಹಾಗಾಗಿ ಪ್ರಮಾಣ ವಚನಕ್ಕೆ ತಡೆನೀಡಿ ಎಂದು ಸೆಂಥಿಲ್ ಕುಮಾರ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.