ಸಂತ್ರಸ್ತೆ ಯುವತಿಯ ದೂರನ್ನು ದಾಖಲಿಸಿ ಯಾವುದೇ ಕ್ರಮಕೈಗೊಳ್ಳದ ನಾಲ್ಕು ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸಲು ಆದೇಶಿಲಾಗಿದೆ ಎಂದು ಉಪ-ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.
ಕೌಶಂಬಿ (ಮಾ.27): ತನಗೆ ಕಿರುಕುಳ ನೀಡುತ್ತಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ವಿಫಲರಾದ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.
ಸಂತ್ರಸ್ತೆ ಯುವತಿಯ ದೂರನ್ನು ದಾಖಲಿಸಿ ಯಾವುದೇ ಕ್ರಮಕೈಗೊಳ್ಳದ ನಾಲ್ಕು ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿದ್ದಾರೆ.
ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸಲು ಆದೇಶಿಲಾಗಿದೆ ಎಂದು ಉಪ-ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.
ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ಕೆಲ ಯುವಕರು ಕಿರುಕುಳ ನೀಡುತ್ತಿದ್ದಾರೆಂದು ವಿದ್ಯಾರ್ಥಿನಿಯು ದೂರನ್ನು ಸಲ್ಲಿಸಿದ್ದರು ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ವೆನ್ನಲಾಗಿದೆ. ಅದರಿಂದ ಬೇಸತ್ತ ಯುವತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆಂದು ಹೇಳಲಾಗಿದೆ.
