ಆತ್ಮಹತ್ಯೆ ಬಳಿಕವೂ ಚಿಕಿತ್ಸೆ ನಾಟಕ?: ಗ್ರಾಮಸ್ಥರಿಂದ ಪ್ರತಿಭಟನೆ..!

First Published 31, May 2018, 3:02 PM IST
Student committed suicide in Mandya
Highlights

ಪ್ಯಾರ ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತಪಟ್ಟಿರುವ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಆಸ್ಪತ್ರೆ ಸಿಬ್ಬಂದಿ ಹಣ ಕೀಳುತ್ತಿದ್ದಾರೆ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ[ಮೇ 31]: ಪ್ಯಾರ ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತಪಟ್ಟಿರುವ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಆಸ್ಪತ್ರೆ ಸಿಬ್ಬಂದಿ ಹಣ ಕೀಳುತ್ತಿದ್ದಾರೆ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯದ ಹೊರವಲಯದಲ್ಲಿರುವ ಸಾಂಜೋ ಆಸ್ಪತ್ರೆ ವಿರುದ್ದ ಲಕ್ಷ್ಮೇಗೌಡನ ದೊಡ್ಡಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ವಿದ್ಯಾಥಿರ್ಥಿನಿ ಮೃತಪಟ್ಟಿದ್ದರೂ ಆಸ್ಪತ್ರೆ ಸಿಬ್ಬಂದಿ ಹಣಕ್ಕಾಗಿ ಚಿಕಿತ್ಸೆ  ನೀಡುವ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ ಆಸ್ಪತ್ರೆ ಆಡಳಿತ‌ ಮಂಡಳಿ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಕೂಡ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪ್ಯಾರ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಭವ್ಯಾ ಎಂಬಾಕೆ ಕಳೆದ ಮೇ ೨೬ ರಂದೇ ಆತ್ಮಹತ್ಯೆಗೆ ಯತ್ನಸಿದ್ದಳು. ಕೂಡಲೇ ಭವ್ಯಳನ್ನು ಸಾಂಜೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ ರಾತ್ರಿ ಭವ್ಯ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಳು ಎನ್ನಲಾಗಿದೆ.  ಸದ್ಯ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

loader