ಬಂಡೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಪಾಚಿಯಿಂದಾಗಿ ಜಾರಿಬಿದ್ದು ಮೃತಪಟ್ಟಿದ್ದಾನೆ.
ದೊಡ್ಡಬಳ್ಳಾಪುರ(ಅ.17): ಸೆಲ್ಫಿ ಹುಚ್ಚಿಗೆ ಪ್ರಾಣ ಕಳೆದುಕೊಂಡ ಘಟನೆ ತಾಲೂಕಿನ ಚೆನ್ನಗಿರಿ ಜಲಪಾತದಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ದೊಡ್ಡಬಳ್ಳಾಪುರದ ನವೀನ್ ಕುಮಾರ್(23) ಮೃತ ವಿದ್ಯಾರ್ಥಿ. ಅಂತಿಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಈತ ಸ್ನೇಹಿತರೊಂದಿಗೆ ಚೆನ್ನಗಿರಿ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದ. ಬಂಡೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಪಾಚಿಯಿಂದಾಗಿ ಜಾರಿಬಿದ್ದು ಮೃತಪಟ್ಟಿದ್ದಾನೆ. ನಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
