ಕೋಲ್ಕತ್ತಾ[ಫೆ.12]: ಸಾಮಾನ್ಯವಾಗಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಆಯೋಜಿಸಿ ಬಹುಮಾನ ನೀಡಲಾಗುತ್ತದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳು ರಸ ಪ್ರಶ್ನೆಯಲ್ಲಿ ಗೆದ್ದರೆ ಉಚಿತವಾಗಿ ಸಂಸತ್‌ ಹಾಗೂ ವಿಧಾನಸಭೆಗಳಿಗೆ ಭೇಟಿ ನೀಡಬಹುದು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜಾರಿಗೊಳಿಸಿದ ಸಮಾಜ ಕಲ್ಯಾಣ ಯೋಜನೆಗಳ ಬಗ್ಗೆ ಕಾಲೇಜು ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಕೇಳಿ ಅದರಲ್ಲಿ ವಿಜೇತ ತಂಡಕ್ಕೆ ಉಚಿತವಾಗಿ ಸಂಸತ್‌ ವೀಕ್ಷಿಸುವ ಅವಕಾಶ ಕಲ್ಪಿಸಿದೆ.

ದಕ್ಷಿಣ 24 ಪರಗಣಗಳ ಬರಸಾತ್‌ನಲ್ಲಿ ಆಯೋಜಿಸಿದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ಕಳೆದವಾರ ಸಂಸತ್ತಿಗೆ ಹಾಗೂ ದ್ವಿತೀಯ ಬಹುಮಾನ ಪಡೆದವರು ವಿಧಾನಸಭೆಗೆ ಭೇಟಿ ನೀಡಿದ್ದಾರೆ. ಇವರ ಎಲ್ಲಾ ಖರ್ಚು ವೆಚ್ಚಗಳನ್ನು ಸರ್ಕಾರವೇ ಭರಿಸಿದೆ. ಇದೇ ರೀತಿ 40 ಸ್ಪರ್ಧೆಗಳನ್ನು ಆಯೋಜಿಸಲು ಸರ್ಕಾರ ಉದ್ದೇಶಿಸಿದೆ.