ತನ್ನ ಸಹಪಾಠಿಗಳು ಇರದ ವೇಳೆಯಲ್ಲಿ ಮಧ್ಯಾಹ್ನದ ಸಮಯದಲ್ಲಿ ತಾನಿದ್ದ ಕೊಠಡಿಯಲ್ಲಿನ ಮಂಚಕ್ಕೆ ಶಿವಾನಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆರನೇ ತರಗತಿ ಓದುತ್ತಿದ್ದ ಬಾಲಕನೊಬ್ಬ ಹಾಸ್ಟೆಲ್​ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಬಾಗಲಕೋಟೆಯ ನಿವಾಸಿ ಶಿವಾನಂದ ಶಿರಗುಪ್ಪಿ ಎಂದು ಗುರುತಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ತನ್ನ ಸಹಪಾಠಿಗಳು ಇರದ ವೇಳೆಯಲ್ಲಿ ಮಧ್ಯಾಹ್ನದ ಸಮಯದಲ್ಲಿ ತಾನಿದ್ದ ಕೊಠಡಿಯಲ್ಲಿನ ಮಂಚಕ್ಕೆ ಶಿವಾನಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುನಗುಂದ ಪೋಲಿಸ್' ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.