ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಇಬ್ಬರು ವಿದ್ಯಾರ್ಥಿಗಳ ವಿರುದ್ಧ  ಎಫ್ಐಆರ್ ದಾಖಲಿಸಲಾಗಿದೆ.

ಲಖನೌ(ಅ.14): ಶಾಲೆ ಎಂದರೆ ಜ್ಞಾನ ದೇಗುಲ. ಅದನ್ನ ಮರೆತ ಕೆಲ ವಿದ್ಯಾರ್ಥಿಗಳು ಸಹಪಾಠಿಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದ ಮುಜಾಫರ್`ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.