ಬೆಂಗಳೂರು[ಜೂ.13]: ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುವುದಿಲ್ಲ ಎಂಬ ರಾಜ್ಯ ಸರ್ಕಾರದ ಹೇಳಿಕೆಗೆ ವಿದ್ಯಾರ್ಥಿ ವಲಯದಲ್ಲಿ ಭಾರೀ ವಿರೋಧ ಕೇಳಿ ಬಂದಿದೆ.

ಸಿಎಂ ಕುಮಾರಸ್ವಾಮಿ ಹಾಗೂ ಸಾರಿಗೆ ಸಚಿವ ಸಿಡಿ ತಮ್ಮಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಬಿವಿಪಿ, ಎಸ್ ಎಫ್ ಐ, ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ನಾಳೆಯಿಂದ ರಾಜ್ಯಾಧ್ಯಂತ ಉಗ್ರ ಹೋರಾಟಕ್ಕೆ ಕರೆ ನೀಡಿದ್ದಾರೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಸಚಿವರುಗಳಿಗೆ ಮನವಿ ಸಲ್ಲಿಸುವ ಜತೆಗೆ ಸಾರಿಗೆ ಸಚಿವರ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿರುವುದಾಗಿ ಎಬಿವಿಪಿ ಕಾರ್ಯದರ್ಶಿ ರಾಜೇಶ್ ಗುರಾಣಿ ತಿಳಿಸಿದ್ದಾರೆ.