ಮಂಗಳೂರು[ಜು. 04] ಪುತ್ತೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದಂತಹ ಘಟನೆ ಖಂಡಿಸಿ ನ್ಯಾಶನಲ್ ಸ್ಟುಡೆಂಟ್ಸ್ ಯುನಿಯನ್ ಆಫ್ ಇಂಡಿಯಾ[ಎನ್ ಎಸ್ ಯುಐ]  ಸಂಘಟನೆ ಪ್ರತಿಭಟನೆ ನಡೆಸಿತು. ನಗರದ ಮೌರ್ಯ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕೇಂದ್ರ  ಬಿಜೆಪಿ ಸರಕಾರದ ವಿರುದ್ದ ಘೋಷಣೆ ಕೂಗಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಹಾಗೂ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದರು. ಅತ್ಯಾಚಾರಿಗಳನ್ನು ಗಲ್ಲಿಗೆ ಹಾಕಬೇಕು ಎಂದು ಒತ್ತಾಯಿಸಿದರು.

ಪುತ್ತೂರು ಗ್ಯಾಂಗ್‌ ರೇಪ್ ಪ್ರಕರಣ: ಐವರು ವಿದ್ಯಾರ್ಥಿಗಳು ಅರೆಸ್ಟ್

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ವಿದ್ಯಾರ್ಥಿನಿ ಮೇಲೆ ಕೃತ್ಯ ಎಸಗಿದ್ದ ಸಹಪಾಠಿಗಳು ಅದನ್ನು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಕೃತ್ಯದಲ್ಲಿ ಭಾಗಿಯಾದ್ದ ಐವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.