ರಾಜ್ಯ ಸರ್ಕಾರ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕಾಗಿ ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿರುವುದಾಗಿ ಹೇಳುತ್ತಿದೆ. ಆದರೆ ಆ ಹಣ ಎಲ್ಲಿಗೆ ಹೋಗುತ್ತದೆ ಎಂಬುದು ಮಾತ್ರ ಯಾರಿಗೂ ತಿಳಿಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಸ್ವಂತ ಕಟ್ಟಡ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಇಂದು ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ಬೀದಿಗಿಳಿದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದರು.
ರಾಜ್ಯ ಸರ್ಕಾರ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕಾಗಿ ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿರುವುದಾಗಿ ಹೇಳುತ್ತಿದೆ. ಆದರೆ ಆ ಹಣ ಎಲ್ಲಿಗೆ ಹೋಗುತ್ತದೆ ಎಂಬುದು ಮಾತ್ರ ಯಾರಿಗೂ ತಿಳಿಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ನಾಲ್ಕು ವರ್ಷದಿಂದ ಸ್ವಂತ ಕಟ್ಟಡವಿಲ್ಲದೆ, ನರಕಯಾತನೆ ಅನುಭವಿಸುವಂತಾಗಿದೆ. ಪ್ರಾತ್ಯಕ್ಷಿಕತೆಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.
ಈ ಬಗ್ಗೆ ಪ್ರಾಂಶುಪಾಲರಾದ ಪ್ರೊ.ನೀಲಾಂಬಿಕಾ ಶೆಟ್ಟಿ ಮಾತನಾಡಿ, ಪ್ರಾಥಮಿಕ ಶಾಲೆಯಲ್ಲಿ ಕಾಲೇಜು ನಡೆಸುತ್ತಿರುವುದರಿಂದ ವಿದ್ಯಾರ್ಥಿನಿಯರಿಗೆ ತೊಂದರೆ ಆಗುತ್ತಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಕಾಲೇಜಿಗೆ ಜಾಗ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
