ಹೀಗಾಗಿ ಪಾಸಾಗುವುದು ಕಷ್ಟ ಎಂಬ ಆತಂಕದಿಂದ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕಾಗವಾಡ/ಉಡುಪಿ(ಮಾ.09):ಪರೀಕ್ಷೆಗೆ ಹೆದರಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಗವಾಡದ ಶಿವಾನಂದ ಮಹಾವಿದ್ಯಾಲಯದ ಮಲ್ಲಪ್ಪ ವಡಿಯರ (17), ಉಡುಪಿಯ ಎಂಜಿಎಂ ಕಾಲೇಜಿನ ಹರೀಶ್ (17) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದ ವಡಯರ ತಾನು ಪರೀಕ್ಷೆಗೆ ಸರಿಯಾಗಿ ತಯಾರಿ ಮಾಡಿಲ್ಲ, ಹೀಗಾಗಿ ಪಾಸಾಗುವುದು ಕಷ್ಟ ಎಂಬ ಆತಂಕದಿಂದ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಹರೀಶ್ ಉಡುಪಿಯ ಕುಂಜಿಬೆಟ್ಟಿನಲ್ಲಿರುವ ಮನೆಯಲ್ಲಿ ಸೀರೆಯಿಂದ ಫ್ಯಾಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಹೆಚ್ಚಿನ ಅಂಕಗಳಿಸಲು ಕಠಿಣ ಅಭ್ಯಾಸದಲ್ಲಿ ತೊಡಗಿದ್ದ ಈತ ಮಾನಸಿಕ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಪೊಲೀಸರು ಶಂಕಿಸಿದ್ದಾರೆ.