ಆಧಾರ್ ಕಾರ್ಡ್ ಕಡ್ಡಾಯವನ್ನು ಪ್ರಶ್ನಿಸಿ ಬಂದ ಅರ್ಜಿಗಳ ವಿಚಾರಣೆಗೆ ಸಾಂವಿಧಾನಿಕ ಪೀಠವನ್ನು ರಚಿಸುತ್ತೇವೆಂದು ಸುಪ್ರೀಂಕೋರ್ಟ್ ಹೇಳಿದ ಬೆನ್ನಲ್ಲೇ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಕೂಡಾ ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ನವದೆಹಲಿ (ಅ.31): ಆಧಾರ್ ಕಾರ್ಡ್ ಕಡ್ಡಾಯವನ್ನು ಪ್ರಶ್ನಿಸಿ ಬಂದ ಅರ್ಜಿಗಳ ವಿಚಾರಣೆಗೆ ಸಾಂವಿಧಾನಿಕ ಪೀಠವನ್ನು ರಚಿಸುತ್ತೇವೆಂದು ಸುಪ್ರೀಂಕೋರ್ಟ್ ಹೇಳಿದ ಬೆನ್ನಲ್ಲೇ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಕೂಡಾ ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರದ ನೀತಿಯನ್ನು ಸುಬ್ರಮಣಿಯನ್ ಸ್ವಾಮಿ ಖಂಡಿಸಿದ್ದಾರೆ. ಆಧಾರ್ ಕಾರ್ಡ್ ದೇಶದ ಭದ್ರತೆಗೆ ಮಾರಕವಾಗಿದೆ. ಈ ಸಂಬಂಧ ವಿವರವಾಗಿ ಪ್ರಧಾನಿಯವರಿಗೆ ಪತ್ರ ಬರೆಯುತ್ತೇನೆ. ಸುಪ್ರೀಂಕೋರ್ಟ್ ಕೂಡಾ ಈ ವಾದವನ್ನು ಒಪ್ಪುತ್ತದೆ ಎನ್ನುವ ನಂಬಿಕೆ ನನಗಿದೆ ಎಂದು ಸ್ವಾಮಿ ಹೇಳಿದ್ದಾರೆ.

Scroll to load tweet…