ಕೊಡಗಿಗೆ ಸ್ವಾಯತ್ತತೆ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಸಂವಿಧಾನ ತಿದ್ದುಪಡಿ ಖಾಸಗಿ ವಿಧೇಯಕ ಮಂಡಿಸಲು ಬಿಜೆಪಿಯ ರಾಜ್ಯ ಸಭಾ ಸದಸ್ಯ ಸುಬ್ರಮಣಿಯನ್‌ಸ್ವಾಮಿ ಮುಂದಾಗಿದ್ದಾರೆ. ಈ ಬಗ್ಗೆ ನಾರಾಯಣ್ ವಿಶ್ವಂ ಎಂಬವರು ಮಾಡಿರುವ ಟ್ವೀಟ್ ಅನ್ನು ಸುಬ್ರಮಣಿಯನ್‌ಸ್ವಾಮಿ ಮರುಟ್ವೀಟ್ ಮಾಡಿದ್ದಾರೆ.

ನವದೆಹಲಿ: ಕೊಡಗಿಗೆ ಸ್ವಾಯತ್ತತೆ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಸಂವಿಧಾನ ತಿದ್ದುಪಡಿ ಖಾಸಗಿ ವಿಧೇಯಕ ಮಂಡಿಸಲು ಬಿಜೆಪಿಯ ರಾಜ್ಯ ಸಭಾ ಸದಸ್ಯ ಸುಬ್ರಮಣಿಯನ್‌ಸ್ವಾಮಿ ಮುಂದಾಗಿದ್ದಾರೆ. ಈ ಬಗ್ಗೆ ನಾರಾಯಣ್ ವಿಶ್ವಂ ಎಂಬವರು ಮಾಡಿರುವ ಟ್ವೀಟ್ ಅನ್ನು ಸುಬ್ರಮಣಿಯನ್‌ಸ್ವಾಮಿ ಮರುಟ್ವೀಟ್ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊಡಗಿಗೆ ಸ್ವಾಯತ್ತೆ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತಿದೆ. ಕೌನ್ಸಿಲ್‌ನ ಪ್ರಯತ್ನದ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಸಹಾನುಭೂತಿ ಹೊಂದಿದ್ದಾರೆ. ಕೊಡವ ಕೌನ್ಸಿಲ್ ನ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು.