ಕುಲಭೂಷಣ್ ಜಾಧವ್ ಅವರ ತಾಯಿ ಮತ್ತು ಪತ್ನಿಗೆ ಅಪಮಾನ ಮಾಡಿದ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಣೆ ಮಾಡಬೇಕು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.
ಮುಂಬೈ (ಡಿ.28) : ಕುಲಭೂಷಣ್ ಜಾಧವ್ ಅವರ ತಾಯಿ ಮತ್ತು ಪತ್ನಿಗೆ ಅಪಮಾನ ಮಾಡಿದ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಣೆ ಮಾಡಬೇಕು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. ‘ಇದೊಂದು ದುರದೃಷ್ಟಕರ ಘಟನೆ. ಇದರಿಂದ ನಮಗೆ ನೋವಾಗಿದೆ ಎಂದಿದ್ದಾರೆ.
ಹಾಗಾಗಿ, ಪಾಕಿಸ್ತಾನದ ವಿರುದ್ಧ ಯುದ್ಧ ಘೋಷಣೆ ಮಾಡಿ, ಅದನ್ನು ನಾಲ್ಕು ಹೋಳುಗಳಾಗಿ ಮಾಡಬೇಕು,’ ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೇ ‘ಇದು ತಮ್ಮ ವೈಯಕ್ತಿಕ ಅನಿಸಿಕೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
