ಡೀಲರ್‌ಗಳಿಗೆ ನೀಡಲಾಗುವ ಕಮಿಷನ್‌ನಲ್ಲಿ ಹೆಚ್ಚಳ ಮಾಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ ನವದಹಲಿಯಲ್ಲಿ 14.2 ಕೆಜಿ ತೂಕದ ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ರೂ. 430.64 ಆಗಲಿದೆ.

ನವದೆಹಲಿ(ನ.2): ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ದರವನ್ನು 38ರಷ್ಟು ಹೆಚ್ಚಳ ಮಾಡಿದ ಬೆನ್ನಲ್ಲೇ ಈಗ ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 2 ಏರಿಕೆ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡೀಲರ್‌ಗಳಿಗೆ ನೀಡಲಾಗುವ ಕಮಿಷನ್‌ನಲ್ಲಿ ಹೆಚ್ಚಳ ಮಾಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ ನವದಹಲಿಯಲ್ಲಿ 14.2 ಕೆಜಿ ತೂಕದ ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ರೂ. 430.64 ಆಗಲಿದೆ. ದರ ಏರಿಕೆಯಾಗುವ ಮೊದಲು 428.59 ಆಗಿತ್ತು. ಜುಲೈ ಬಳಿಕ ಇದು ಆರನೇ ಏರಿಕೆಯಾಗಿದೆ. ಯುಪಿಎ ಸರ್ಕಾರ ಮಾರುಕಟ್ಟೆಗೆ ಅನುಗುಣವಾಗಿ ಡೀಸೆಲ್ ದರ ಪರಿಷ್ಕರಣೆಗೆ ಅವಕಾಶ ಮಾಡಿತ್ತು. ಅದೇ ನಿಯಮವನ್ನು ಎಲ್‌ಪಿಜಿ ಮತ್ತು ಸೀಮೆ ಎಣ್ಣೆ ಬೆಲೆಗೂ ಅನುಸರಿಸಲಾಗಿದೆ.