ನವದೆಹಲಿ(ಸೆ.18): ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲಿನ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.
ಉಗ್ರರ ದಾಳಿ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಸೇನಾ ಪ್ರಧಾನ ಕಚೇರಿ ಮೇಲಿನ ಉಗ್ರ ದಾಳಿ ಖಂಡನೀಯ. ಭಾರತದಲ್ಲಿ ದಾಳಿ ನಡೆಸಲು ಉಗ್ರರಿಗೆ ಸಹಾಯ ಮಾಡಿದವರಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಬರೆದುಕೊಂಡಿದ್ದಾರೆ.
ಇನ್ನು ಉಗ್ರರ ದಾಳಿಯಲ್ಲಿ ಹುತಾತ್ಮರಾದ 17 ಯೋಧರಿಗೆ ಸೆಲ್ಯೂಟ್ ಮಾಡಿದ್ದಾರೆ. ನಿಮ್ಮ ಅಪೂರ್ವ ಸೇವೆಯನ್ನು ಈ ದೇಶ ಎಂದಿಗೂ ಮರೆಯಲ್ಲಾ. ನಿಮ್ಮ ಅಗಲಿಕೆಯನ್ನು ತಡೆದುಕೊಳ್ಳುವ ಶಕ್ತಿ ದೇವರು ನಿಮ್ಮ ಕುಟುಂಬಕ್ಕೆ ನೀಡಲಿ ಎಂದು ಟ್ವೀಟಿಸಿದ್ದಾರೆ.
