ಗಂಡ -ಹೆಂಡತಿಯ ಕಲಹ ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಗಂಡನ ಕಿರುಕುಳದಿಂದ ಬೇಸತ್ತು ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಂಗಳೂರು(ಆ.14): ಗಂಡ -ಹೆಂಡತಿಯ ಕಲಹ ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಗಂಡನ ಕಿರುಕುಳದಿಂದ ಬೇಸತ್ತು ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತೇಜಾವತಿ ಆತ್ಮಹತ್ಯೆಗೆ ಶರಣಾದ ಮಹಿಳೆ. ಪತಿಯ ಕಿರುಕುಳವೇ ಪತ್ನಿಯ ಆತ್ಮಹತ್ಯೆ ಕಾರಣ ಎಂದು ತಿಳಿದು ಬಂದಿದೆ. ಗಂಡ-ಹೆಂಡತಿ ಇಬ್ಬರೂ ಸರ್ಕಾರಿ ಶಾಲಾ ಶಿಕ್ಷಕರಾಗಿದ್ರು. ಆದ್ರೆ ಇಬ್ಬರ ನಡುವೇ ವೈಮನಸ್ಸು ಇದ್ದ ಹಿನ್ನೆಲೆಯಲ್ಲಿ ಜಗಳ ವಿಕೋಪಕ್ಕೆ ಹೋಗಿ ವಿಷ ಸೇವಿಸಿ ಆತ್ಮಹತೆಗೆ ಶರಣಾಗಿದ್ದಾಳೆ. 

ವಿಷ ಸೇವಿಸಿದ್ದ ತೇಜಾವತಿಯನ್ನು ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ತೇಜಾವತಿ ಸಾವನ್ನಪಿದ್ದಾಳೆ. ಈ ಸಂಬಂಧ ಗಂಡನನ್ನು ವಶಕ್ಕೆ ಪಡೆದಿರುವ ಕಾಮಾಕ್ಷಿಪಾಳ್ಯ ಪೊಲೀಸರು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.