ಸುಮಲತಾ ಅಂಬರೀಷ್ ಗೆ ಬಿಜೆಪಿ ಸಹಾಯ ಮಾಡುತ್ತಾ?| ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಸುಮಲತಾ| ಬಿಜೆಪಿ ನಾಯಕರು ಚರ್ಚೆ ಮಾಡಿದರೆ ನಿರ್ಧಾರ ತಿಳಿಸುವುದಾಗಿ ಹೇಳಿದ ಸುಮಲತಾ?| ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬೆಂಬಲಕ್ಕೆ ಎಂದ ಸುಮಲತಾ| ಬಿಜೆಪಿ ಮುಖಂಡರು ಸಂಪರ್ಕಿಸಿದರೆ ಚರ್ಚೆಗೆ ಸಿದ್ಧ ಎಂದ ಸುಮಲತಾ|

ಮೈಸೂರು(ಮಾ.07): ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಸುಮಲತಾ ಅಂಬರೀಷ್, ಬಿಜೆಪಿಯತ್ತ ಒಲವು ಹೊಂದಿದ್ದಾರೆಯೇ ಎಂಬ ಅನುಮಾನ ಇದೀಗ ಮೂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೈಸೂರಿನಲ್ಲಿ ಚುನಾವಣೆ ಸ್ಪರ್ಧೆ ಕುರಿತು ಮಾತನಾಡಿದ ಸುಮಲತಾ, ತಮಗೆ ಮಂಡ್ಯ ಜನರು ಆಶೀರ್ವಾದ ಮಾಡುವ ಭರವಸೆ ಇದೆ ಎಂದು ಹೇಳಿದರು. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ಕೂಡ ತಮ್ಮ ಪರ ಇದ್ದು, ಚುನಾವಣೆಯಲ್ಲಿ ತಮ್ಮ ಪರವಾಗಿ ಪ್ರಚಾರ ಮಾಡಲಿದ್ದಾರೆ ಎಂದು ಸುಮಲತಾ ವಿಶ್ವಾಸ ವ್ಯಕ್ತಪಡಿಸಿದರು.

"

ಈ ಮಧ್ಯೆ ಬಿಜೆಪಿ ಬೆಂಬಲದ ಕುರಿತು ಕೇಳಲಾದ ಪ್ರಶ್ನೆಗೆ ಖಚಿತ ಉತ್ತರ ನೀಡದ ಸುಮಲತಾ, ಒಂದು ವೇಳೆ ಬಿಜೆಪಿ ಮುಖಂಡರು ಸಂಪರ್ಕಿಸಿದರೆ ಅವರೊಂದಿಗೆ ಚರ್ಚಿಸಿ ತಮ್ಮ ನಿರ್ಧಾರ ತಿಳಿಸುವುದಾಗಿ ಸ್ಪಷ್ಟಪಡಿಸಿದರು.

ಇದೇ ವೇಳೆ ಮಂಡ್ಯ ಬಿಟ್ಟು ಬೇರೆಲ್ಲೂ ಸ್ಪರ್ಧೆ ಮಾಡುವುದು ಸಾಧ್ಯವೇ ಇಲ್ಲ ಎಂದ ಸುಮಲತಾ, ತಮಗೆ ಯಾವುದೇ ಹುದ್ದೆಯ ಆಸೆಯಿಲ್ಲ ಎಂದು ಸ್ಪಷ್ಟಪಡಿಸಿದರು.