ಬೆಂಗಳೂರು :  ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಬಿಜೆಪಿಯ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭಾನುವಾರ ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್‌ ಭೇಟಿಯಾಗಿ ಕೃತಜ್ಞತೆ ಸಲ್ಲಿಸಲಿದ್ದಾರೆ.

ಸದಾಶಿವನಗರದ ಕೃಷ್ಣ ಅವರ ನಿವಾಸದಲ್ಲಿ ಮಧ್ಯಾಹ್ನ 12 ಗಂಟೆಗೆ ಭೇಟಿಗೆ ಸಮಯ ನಿಗದಿಯಾಗಿದೆ. ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿಯೂ ಆಗಿರುವ ಕೃಷ್ಣ ಅವರೊಂದಿಗೆ ಸುಮಲತಾ ಮಾತುಕತೆ ನಡೆಸಲಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ನಿಲ್ಲಿಸದೆ ಸುಮಲತಾ ಅವರಿಗೆ ಬೆಂಬಲ ಸೂಚಿಸಿದ್ದರ ಹಿಂದೆ ಕೃಷ್ಣ ಪ್ರಭಾವ ಬೀರಿದ್ದರು. ಈಗ ಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಪುತ್ರನ ವಿರುದ್ಧ ವಿಜಯ ಪಾತಕೆ ಹಾರಿಸಿದ ಸುಮಲತಾ ಅವರು, ತಮ್ಮ ಗೆಲುವಿನಲ್ಲಿ ಪಾತ್ರವಹಿಸಿದ ಹಿರಿಯ ನಾಯಕರಿಗೆ ಕೃತಜ್ಞತೆ ಅರ್ಪಿಸಲಿದ್ದಾರೆ.