ಪತ್ನಿ ಸುನಂದಾ ಪುಷ್ಕರ್‌ ನಿಗೂಢ ಸಾವಿನ ಪ್ರಕರಣ ಸಂಬಂಧ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.  

ನವದೆಹಲಿ: ಪತ್ನಿ ಸುನಂದಾ ಪುಷ್ಕರ್‌ ನಿಗೂಢ ಸಾವಿನ ಪ್ರಕರಣ ಸಂಬಂಧ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಈಗಾಗಲೇ ಪ್ರಕರಣ ಸಂಬಂಧ ಜು.7ರಂದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ ತರೂರ್‌ಗೆ ಸಮನ್ಸ್‌ ನೀಡಿದೆ. 

ದೆಹಲಿ ಪೊಲೀಸ್‌ ಪರ ವಾದ ಮಂಡಿಸಿರುವ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಅತುಲ್‌ ಶ್ರೀವಾತ್ಸವ, ತರೂರ್‌ ಅವರೊಬ್ಬ ಪ್ರಭಾವಿ ವ್ಯಕ್ತಿಯಾಗಿದ್ದು, ವಿಚಾರಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಬಾರದು ಎಂದು ಹೇಳಿದ್ದರು. 

ಆದರೆ, ಈಗಾಗಲೇ ಅರೋಪಪಟ್ಟಿಸಲ್ಲಿಸಿರುವುದರಿಂದ ಜಾಮೀನು ನೀಡಬೇಕು ಎಂದು ತರೂರ್‌ ಪರ ವಕೀಲರು ವಾದಿಸಿದ್ದರು. 

ಇಂದು ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತರೂರ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.