ಪತ್ನಿ ಸುನಂದಾ ಪುಷ್ಕರ್ ಸಾವಿನ ವಿಚಾರದಲ್ಲಿ ನಾನು ಯಾವುದನ್ನು ಮುಚ್ಚಿಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ಶಶಿ ತರೂರು ಹೇಳಿದ್ದಾರೆ.

ನವದೆಹಲಿ (ಮೇ.09): ಪತ್ನಿ ಸುನಂದಾ ಪುಷ್ಕರ್ ಸಾವಿನ ವಿಚಾರದಲ್ಲಿ ನಾನು ಯಾವುದನ್ನು ಮುಚ್ಚಿಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ಶಶಿ ತರೂರು ಹೇಳಿದ್ದಾರೆ.

ಸುನಂದಾ ಪುಷ್ಕರ್ ಸಾವಿನ ಪ್ರಕರಣದ ತನಿಖೆ ನಡೆಯುತ್ತಿದೆ. ಏತನ್ಮಧ್ಯೆ ಇಂಗ್ಲೀಷ್ ಸುದ್ದಿ ವಾಹಿನಿಯೊಂದು ಈ ವಿಚಾರವನ್ನು ಎತ್ತಿದ್ದು, 2014, ಜ.14 ರಂದು ಪುಷ್ಕರ್ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ತೆಗೆದುಕೊಂಡು ಹೋಗಲಾಗಿತ್ತು ಎಂದು ವಾಹಿನಿ ವರದಿ ಮಾಡಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಟೇಪನ್ನು ಸಹ ಬಿಡುಗಡೆ ಮಾಡಿದೆ.

ವರದಿ ಪ್ರಸಾರವಾದ ಬಳಿಕ ಶಶಿ ತರೂರು ಟ್ವೀಟ್ ಮಾಡಿ ನಾನು ಪುಷ್ಕರ್ ಸಾವಿನ ವಿಚಾರದಲ್ಲಿ ಯಾವುದನ್ನೂ ಮುಚ್ಚಿಟ್ಟಿಲ್ಲ ಎಂದಿದ್ದಾರೆ.

ವಾಹಿನಿಯಲ್ಲಿ ಪ್ರಸಾರವಾದ ಸುದ್ದಿಯನ್ನು ನೋಡಿ ಬಹಳ ಬೇಸರವಾಯಿತು. ನನ್ನ ವೈಯಕ್ತಿಕ ನೋವನ್ನು ಇಟ್ಟಿಕೊಂಡು ಶೋಷಣೆ ಮಾಡುತ್ತಿದ್ದಾರೆ. ನಾನ್ಯಾವುದನ್ನೂ ಮುಚ್ಚಿಟ್ಟಿಲ್ಲ.ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸಹಕಾರ ನೀಡಿದ್ದೇನೆ. ಇದು ಮರ್ಡರ್ ಅಥವಾ ಕ್ರೈಮ್ ಎಂದು ಇನ್ನೂ ಸಾಬೀತಾಗಿಲ್ಲ ಎಂದು ತರೂರ್ ಹೇಳಿದ್ದಾರೆ.