ಶಶಿ ತರೂರ್ ತನಿಖೆ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಸುಬ್ರಮಣಿಯನ್ ಸ್ವಾಮಿ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹಾಗೂ ಡೆಲ್ಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ನವದೆಹಲಿ(ಅ.27): ಕಾಂಗ್ರೆಸ್ ಸಂಸದ ಶಶಿ ತರೂರ್'ರ ಪತ್ನಿ ಸುನಂದಾ ಪುಷ್ಕರ್'ರ ನಿಗೂಢ ಸಾವಿನ ಕುರಿತು ನ್ಯಾಯಾಲಯದ ಕಣ್ಗಾವಲಿನ ತನಿಖೆ ಕೋರಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ. ಜೊತೆಗೆ ಇದು ರಾಜಕೀಯ ಪ್ರೇರಿತ ಅರ್ಜಿ ಎಂದು ಕಿಡಿಕಾರಿದೆ.
ಹಾಲಿ ನಡೆಯುತ್ತಿರುವ ತನಿಖೆಯ ದಿಕ್ಕನ್ನು ಯಾರಾದರೂ ತಪ್ಪಿಸಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಹೀಗಿದ್ದರೂ, ರಾಜಕೀಯ ಉದ್ದೇಶಕ್ಕಾಗಿ ಇಂಥ ಪ್ರಕರಣಗಳಲ್ಲಿ ನ್ಯಾಯಾಲಯಗಳನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂದು ಕೋರ್ಟ್ ಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡಿದೆ.
ಶಶಿ ತರೂರ್ ತನಿಖೆ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಸುಬ್ರಮಣಿಯನ್ ಸ್ವಾಮಿ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹಾಗೂ ಡೆಲ್ಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.