ತಡ ರಾತ್ರಿ ಈ 9 ಆರೋಪಿಗಳನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ, ವಿಚಾರಣೆ ಮುಂದುವರೆಸಿದ್ದಾರೆ.

ಬೆಂಗಳೂರು(ಮಾ. 10): ಕಳೆದ ಬುಧವಾರ ಬೆಳ್ಳಂಬೆಳಗ್ಗೆ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಸುನೀಲ್ ಕೊಲೆ ಆರೋಪಿಗಳು ಸೆರೆಯಾಗಿದ್ದಾರೆ. ರೌಡಿ ಶೀಟರ್ ಸುನೀಲ್ ಮನೆಗೇ ನುಗ್ಗಿ, ಆತನನ್ನ ಹೊರಗೆಳೆದು, ಹೆತ್ತ ತಾಯಿ ಮುಂದೆಯೇ ಕೊಚ್ಚಿ ಕೊಲೆ ಮಾಡಿದ್ದ ಸ್ಪಾಟ್ ನಾಗ ಮತ್ತು ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ನಾಗರಾಜ ಅಲಿಯಾಸ್ ಸ್ಪಾಟ್ ನಾಗ ಸೇರಿದಂತೆ 9 ಜನರನ್ನ ಈ ಪ್ರಕರಣದ ಆರೋಪದ ಮೇಲೆ ಅರೆಸ್ಟ್ ಮಾಡಲಾಗಿದೆ. ನಿನ್ನೆ ತಡರಾತ್ರಿ ಈ 9 ಆರೋಪಿಗಳನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ, ವಿಚಾರಣೆ ಮುಂದುವರೆಸಿದ್ದಾರೆ.