ಸನ್ನಿ ಲಿಯೋನ್ ಕಾರ್ಯಕ್ರಮ ಸಂಸ್ಕೃತಿಗೆ ಪೂರಕವಾದುದಲ್ಲ. ಹೀಗಾಗಿ, ಸನ್ನಿ ಲಿಯೋನ್ ಕಾರ್ಯಕ್ರಮ ಬೇಡ ಎಂದಿದ್ದೇವೆ' - ಗೃಹ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು(ಡಿ.15): ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಮಾಜಿ ಪೋರ್ನ್ ಸ್ಟಾರ್ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದುಗೊಳಿಸುವಂತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಆದೇಶ.
ಸನ್ನಿ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಈಗಾಗಲೇ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರೆ ರದ್ದು ಮಾಡಲು ತಿಳಿಸುವೆ. ಸನ್ನಿ ಲಿಯೋನ್ ಕಾರ್ಯಕ್ರಮ ಸಂಸ್ಕೃತಿಗೆ ಪೂರಕವಾದುದಲ್ಲ. ಹೀಗಾಗಿ, ಸನ್ನಿ ಲಿಯೋನ್ ಕಾರ್ಯಕ್ರಮ ಬೇಡ ಎಂದಿದ್ದೇವೆ' ಎಂದು ತಿಳಿಸಿದರು.
ಹೊಸ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ನೈಟ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
