ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನ ಸುಪ್ರೀಂಕೋರ್ಟ್ 2 ದಿನ ಮುಂದೂಡಿದೆ

ನವದೆಹಲಿ(ಸೆ.27): ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನ ಸುಪ್ರೀಂಕೋರ್ಟ್ 2 ದಿನ ಮುಂದೂಡಿದ್ದು, 3 ದಿನ 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನೀರಿನ ಸಮಸ್ಯೆ ಕುರಿತಂತೆ ಕರ್ನಾಟಕ ಮತ್ತು ತಮಿಳುನಾಡು ಅಧಿಕಾರಿಗಳ ಸಭೆ ನಡೆಸಲು ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. 2 ದಿನ ದಿನ ಚರ್ಚೆ ನಡೆಸಿ ಒಂದು ತೀರ್ಮಾನ ಕೈಗೊಳ್ಳುವಂತೆ ಸೂಚಿಸಿದ್ದು, ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮತ್ತೆ ವಿಚಾರಣೆ ನಡೆಯಲಿದೆ.