1) ರಾಮನಿಗೆ ದೊರೆತ ಅಯೋಧ್ಯೆ: ಶತಮಾನಗಳ ನಂಬಿಕೆಗೆ ಸುಪ್ರೀಂ ತೀರ್ಪಿನ ನೈವೇದ್ಯೆ!

ದೇಶ ಕಾತರದಿಂದ ಕಾಯುತ್ತಿದ್ದ ಐತಿಹಾಸಿಕ ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದದ ತೀರ್ಪನ್ನು ಕೊನೆಗೂ ಸುಪ್ರೀಂಕೋರ್ಟ್ ಪ್ರಕಟಿಸಿದೆ. ವಿವಾದಿತ 2.77 ಎಕರೆ ಜಾಗವನ್ನು ರಾಮಲಲ್ಲಾಗೆ ವಹಿಸಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ. 

2) ಅಯೋಧ್ಯೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲ್ಲ: ಸುನ್ನಿ ವಕ್ಫ್ ಬೋರ್ಡ್ ಸ್ಪಷ್ಟನೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ಭೂವಿವಾದದ ಕುರಿತಾದ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸುವದಿಲ್ಲ ಎಂದು ಸುನ್ನಿ ವಕ್ಫ್ ಬೋರ್ಡ್ ಸ್ಪಷ್ಟಪಡಿಸಿದೆ.

3) ಕೊನೆಗೂ ರಾಮನಿಗೆ ಸೇರಿತು ಅಯೋಧ್ಯೆ; ಸಿನಿ ತಾರೆಯರು ಸ್ವಾಗತಿಸಿದ್ದು ಹೀಗೆ!

ಶತಮಾನಗಳಿಂದ ಚರ್ಚಾಸ್ಪದವಾಗಿದ್ದ ರಾಮ ಮಂದಿರ- ಬಾಬ್ರಿ ಮಸೀದಿ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ 2.77 ಎಕರೆ ಭೂಮಿಯನ್ನು ರಾಮಲಲ್ಲಗೆ ವಹಿಸಿ ರಾಮ ಮಂದಿರ ನಿರ್ಮಾಣಕ್ಕೆ ಅಸ್ತು ಎಂದಿದೆ. ಇದಕ್ಕೆ ಪರ್ಯಾಯವಾಗಿ ಮುಸಲ್ಮಾನರಿಗೆ 5 ಎಕರೆ ಪ್ರತ್ಯೇಕ ಭೂಮಿಯನ್ನು ನೀಡಬೇಕೆಂದು ಸುಪ್ರೀಂ ಹೇಳಿದೆ.  ಈ ತೀರ್ಪಿನ ಕುರಿತು ಸಿನಿ ತಾರೆಯರ ಪ್ರತಿಕ್ರಿಯೆ ನೀಡಿದ್ದಾರೆ.

4) ರಾಮ ಮಂದಿರ ಕಟ್ಟಲು ಮುಸ್ಲಿಂ ಸ್ವಯಂ ಸೇವಕರಾಗಿ ನಾವೂ ಬರ್ತೀವಿ: ರೋಷನ್ ಬೇಗ್

ರಾಮಮಂದಿರ ನಮ್ಮ ದೇಶದಲ್ಲಿ ಕಟ್ಟದೆ ಪಾಕಿಸ್ತಾನದಲ್ಲಿ ಕಟ್ಟೋಕಾಗತ್ತಾ..? ಎಂದು ಪ್ರಶ್ನಿಸಿರುವ ಅನರ್ಹ ಶಾಸಕ ರೋಷನ್ ಬೇಗ್ ಅಯೋಧ್ಯೆ ತೀರ್ಪನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಹಾಗೆಯೇ ರಾಮಮಂದಿರ ನಿರ್ಮಿಸುವಾಗ ನಾವು ಸ್ವಯಂ ಸೇವಕರನ್ನು ಕರೆದುಕೊಂಡು ಬಂದು ನೆರವಾಗ್ತೀವಿ ಎಂದು ಭರವಸೆ ನೀಡಿದ್ದಾರೆ.

5) ಬಾಬರ್ ಅಯೋಧ್ಯೆ(5 ಎಕರೆ)ಯಲ್ಲೇ ಇರಲಿದ್ದಾನೆ: ಸಹೋದರರ ನಂಬಿಕೆ ಮುಖ್ಯ ಎಂದ ಸುಪ್ರೀಂ!

ದೇಶ ಕಾತರದಿಂದ ಕಾಯುತ್ತಿದ್ದ ಐತಿಹಾಸಿಕ ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದದ ತೀರ್ಪನ್ನು ಕೊನೆಗೂ ಸುಪ್ರೀಂಕೋರ್ಟ್ ಪ್ರಕಟಿಸಿದೆ. ವಿವಾದಿತ 2.77 ಎಕರೆ ಜಾಗವನ್ನು ರಾಮಲಲ್ಲಾಗೆ  ವಹಿಸಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಆದರೆ ಮಸೀದಿ ನಿರ್ಮಾಣಕ್ಕೆ  ಅಯೋಧ್ಯೆಯಲ್ಲೇ ಪ್ರತ್ಯೇಕ 5 ಎಕರೆ ಜಾಗ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

6) ರಾಮಭಕ್ತಿ, ರಹೀಂಭಕ್ತಿ, ರಾಷ್ಟ್ರ ಭಕ್ತಿಗೆ ಎರಡೂ ಶಕ್ತಿ: ಅಯೋಧ್ಯೆ ತೀರ್ಪಿಗೆ ಮೋದಿ ಯುಕ್ತಿ

ಭಾರತ ಇಂದು ನಿಟ್ಟಿಸಿರು ಬಿಟ್ಟಿದೆ.  ಹಲವು ದಶಕಗಳಿಂದ ಕಾಡುತ್ತಿದ್ದ ವಿವಾದವೊಂದು ತೆರೆಕಂಡಿದೆ. ಸರ್ವೋಚ್ಛ ನ್ಯಾಯಾಲಯದ ಪಂಚಪೀಠ ಶನಿವಾರ ಬೆಳಗ್ಗೆ ಅಯೋಧ್ಯೆ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇದು ಯಾರದ್ದೇ ಸೋಲು-ಗೆಲುವು ಅಲ್ಲ, ಯಾರು ಉದ್ವೇಗಕ್ಕೆ ಒಳಗಾಗಬಾರದು, ಅಥವಾ ವಿಜೃಂಭಣೆ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. 

7) 5 ಎಕರೆ ಭೂಮಿಯ ಭಿಕ್ಷೆ ಬೇಡ: ಇದು ಒವೈಸಿ ರಿಯಾಕ್ಷನ್!

 ಅಯೋಧ್ಯೆ ಭೂವಿವಾದ ಕುರಿತಾದ ಸುಪ್ರೀಂಕೋರ್ಟ್ ತೀರ್ಪನ್ನು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ತಿರಸ್ಕರಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಅಂತಿಮವಾದರೂ  ದೋಷರಹಿತವಲ್ಲ ಎಂದು ಅಸದುದ್ದೀನ್ ಒವೈಸಿ ಮಾರ್ಮಿಕವಾಗಿ ಹೇಳಿದ್ದಾರೆ. 

8) ಅಯೋಧ್ಯೆ ತೀರ್ಪಿಗೂ ಮುನ್ನ ಪುರಾತತ್ವ ಇಲಾಖೆ ಕಲೆ ಹಾಕಿದ್ದ ಈ 10 ಸಾಕ್ಷ್ಯಗಳು

ಅಯೋಧ್ಯೆ ಭೂವಿವಾದದ ತೀರ್ಪು ಹೊರಬಂದಿದೆ. ಆದರೆ ಇದು ಒಂದೆರಡು ವರ್ಷಕ್ಕೆ ಮುಗಿದ ಕೆಲಸವಲ್ಲ. ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆದಿದೆ. ವಿಚಾರಣೆ ವೇಳೆ ಭಾರತೀಯ ಪುರಾತತ್ವ ಇಲಾಖೆ ಒದಗಿಸಿದ ದಾಖಲೆಗಳು ಅಷ್ಟೇ ಮಹತ್ವ ಪಡೆದುಕೊಂಡಿದೆ.


9) ವಿವಾದ ಇತ್ಯರ್ಥ ಬಯಸಿದ್ದೇವು, ಬಗೆಹರಿದಿದೆ: ಮೋಹನ್ ಭಾಗವತ್!

ಅಯೋಧ್ಯೆ-ಬಾಬರಿ ಮಸೀದಿ ತೀರ್ಪನ್ನು ಸ್ವಾಗತಿಸಿರುವ RSS ಮುಖ್ಯಸ್ಥ ಮೋಹನ್ ಭಾಗವತ್, ದೀರ್ಘಕಾಲದ ವಿವಾದ ಇತ್ಯರ್ಥವಾಗಲಿ ಎಂದು ಸಂಘ ಪರಿವಾರ ಬಯಸಿತ್ತು ಎಂದು ಹೇಳಿದ್ದಾರೆ. 


10) ಸುಪ್ರೀಂ ಕೋರ್ಟ್ ತೀರ್ಪು ಅಲ್ಲಾಹನು ಬಯಸಿದ ತೀರ್ಪು: ಮುಸ್ಲಿಂ ಮುಖಂಡ

ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಎಲ್ಲಾ ವರ್ಗದವರು ಸ್ವಾಗತಿಸಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಪ್ರತಿಕ್ರಿಯಿಸಿದ್ದು ಹೀಗೆ..